Advertisement

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ RN ಸುದರ್ಶನ ಇನ್ನಿಲ್ಲ

01:28 PM Sep 08, 2017 | Sharanya Alva |

ಬೆಂಗಳೂರು: 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ಸುದರ್ಶನ(78) ಅವರು ಅನಾರೋಗ್ಯದಿಂದ ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ರಟ್ಟಿಹಳ್ಳಿ ನಾಗೇಂದ್ರ ಸುದರ್ಶನ್ ಅವರು ಕನ್ನಡ ಚಿತ್ರರಂಗದ ಹಿರಿಯ ನಟ, ಅವರು ಕನ್ನಡ, ತಮಿಳು, ಹಿಂದಿ, ತೆಲುಗು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದರು. ಸುಮಾರು 3 ದಶಕಗಳ ಕಾಲ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಅವರು ಸುಮಾರು 250 ಸಿನಿಮಾಗಳಲ್ಲಿ ನಟಿಸಿದ್ದರು.

ತನ್ನ 21ನೇ ವಯಸ್ಸಿಗೆ 1961ರಲ್ಲಿ ತೆರೆಕಂಡಿದ್ದ ವಿಜಯನಗರ ವೀರಪುತ್ರ ಎಂಬ ಕನ್ನಡ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಿಲನ್ ಆಗಿ ಗುರುತಿಸಿಕೊಳ್ಳುವ ಮೊದಲು ಆರ್ ಎನ್ ಸುದರ್ಶನ್ ಅವರು ಸುಮಾರು 60 ಸಿನಿಮಾಗಳಲ್ಲಿ ಹೀರೋ ಆಗಿದ್ದರು. ಅಲ್ಲದೇ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ಪಾತ್ರದ ಮೂಲಕವೂ ಜನಮನ ಗೆದ್ದಿದ್ದರು.

ಸುದರ್ಶನ್ ಅವರು ಹಾಡಿರುವ ಹೂವೊಂದು ಬಳಿಬಂದು, ತಾಕೀತು ಎನ್ನದೆಯಾ ಎಂಬ ಹಾಡು ಅಪಾರ ಜನಪ್ರಿಯತೆ ಗಳಿಸಿತ್ತು. 1975ರಲ್ಲಿ ತೆರೆಕಂಡ ಶುಭಮಂಗಳ ಚಿತ್ರದ ಹಾಡು ಇದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next