Advertisement

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

08:11 PM Jan 01, 2025 | Team Udayavani |

ಮೈಸೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದರೂ, ಅವರಿಗೆ ಪ್ರತಿಭೆಯನ್ನು ಪ್ರದರ್ಶನ ಮಾಡಲು ಸೂಕ್ತ ವೇದಿಕೆ ಸಿಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್‌ ಅಭಿಪ್ರಾಯಪಟ್ಟರು.

Advertisement

ನಗರದ ಜೆಕೆ ಮೈದಾನದಲ್ಲಿ ಮೇಕ್‌ ಸೊಸೈಟಿ ಸ್ಮೈಲ್‌ ಫೌಂಡೇಶನ್‌ ವತಿಯಿಂದ ಆಯೋಜಿಸಿದ್ದ 4ನೇ ವರ್ಷದ ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ “ಸಿನಿ ಸಂತೆ’ ಸಮಾರೋಪದಲ್ಲಿ ಅತ್ಯುತ್ತಮ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಹೊಸ ಪ್ರಯೋಗಗಳು, ನಿರ್ದೇಶನ, ಸಂಗೀತ ಸಾಹಿತ್ಯ ಇವೆಲ್ಲದಕ್ಕೂ ಮನ್ನಣೆ ನೀಡಲು ಸಿನಿ ಸಂತೆ ರೀತಿಯ ವಸ್ತುಪ್ರದರ್ಶನ ಉತ್ತಮ ವೇದಿಕೆ. ಅವರ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡತ್ತಿರುವುದು ಉತ್ತಮ ಬೆಳವಣಿಗೆ. ಕಲಾವಿದರಾಗಿ ನಾವು ಬೆಳೆಯುವ ಜತೆಗೆ ಹೊಸ ಕಲಾವಿದರನ್ನು ಕರೆತಂದು ವೇದಿಕೆ ಕಲ್ಪಿಸಿ, ಪೋ›ತ್ಸಾಹಿಸಿದರೆ ಕಲಾವಿದನಲ್ಲಿರುವ ಕಲೆ ಸಾರ್ಥಕವಾಗುತ್ತದೆ ಎಂದರು.

ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ ಖಾನ್‌ ಮಾತನಾಡಿ, ಮೈಸೂರು ಕಲಾವಿದರ ತವರೂರು. ನಾಟಕ, ನೃತ್ಯ, ಗಾಯನ, ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸಾವಿರಾರು ಕಲಾವಿದರು ಮೈಸೂರಿನ ಸಾಂಸ್ಕೃತಿಕ ಹಿರಿಮೆ ಶ್ರೀಮಂತಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಬೇಸಿಗೆ ಶಿಬಿರ ಆಯೋಜಿಸಿ ಯುವ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವ ಚಿಂತನೆಯಿದೆ ಎಂದರು.

ಮೈಸೂರು ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವದ ಆಯೋಜಕಿ ರಂಜಿತಾ ಸುಬ್ರಹ್ಮಣ್ಯ, ಸಂಧ್ಯಾ ರಾಣಿ, ರೇಖಾ ಶ್ರೀನಿವಾಸ್‌ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next