Advertisement

Director Guruprasad: ಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆ*ತ್ಮಹತ್ಯೆ

02:02 PM Nov 03, 2024 | Team Udayavani |

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ (Director Guruprasad) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

Advertisement

ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

5-6 ದಿನಗಳ ಹಿಂದೆ ಅಪಾರ್ಟ್‌  ಮೆಂಟ್‌ ಗೆ ಬಂದಿದ್ದರು. 3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅವರ ವಾಸವಾಗಿದ್ದ ಅಪಾರ್ಟ್‌ ಮೆಂಟ್‌ ನಿಂದ ಕೊಳತೆ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸಾಲಗಾರರ ಕಿರುಕುಳದಿಂದ ಬೇಸತ್ತು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್‌ ಮೆಂಟ್‌ನಲ್ಲಿ ಫ್ಯಾನಿಗೆ ನೇಣುಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಅಪಾರ್ಟ್‌ ಮೆಂಟ್‌ ನಲ್ಲಿ ಅವರು ಕಳೆದ 8 ತಿಂಗಳಿನಿಂದ ವಾಸವಾಗಿದ್ದರು. ಇತ್ತೀಚೆಗೆ ಅವರು ಎರಡನೇ ಮದುವೆ ಆಗಿದ್ದರು.

Advertisement

ʼಮಠʼ, ʼಎದ್ದೇಳು ಮಂಜುನಾಥʼ, ʼಡೈರೆಕ್ಟರ್‌ ಸ್ಪೆಷೆಲ್‌ʼ ʼಎರಡನೇ ಸಲʼ, ʼರಂಗನಾಯಕʼ ಸೇರಿದಂತೆ ಹಲವು ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದರು. ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು.

ಸದ್ಯ ʼಅಡೆಮಾʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತು.

ಇತ್ತೀಚೆಗೆ ದೂರು ದಾಖಲು..  ನಿರ್ದೇಶಕ ಗುರುಪ್ರಸಾದ್ ವಿರುದ್ಧ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜಯನಗರದ ಟೋಟಲ್ ಕನ್ನಡ ಮಳಿಗೆ ಮಾಲೀಕ ಲಕ್ಷ್ಮೀಕಾಂತ್ ಅವರು ಗುರುಪ್ರಸಾದ್  ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗುರುಪ್ರಸಾದ್‌ 2019ರಲ್ಲಿ ಟೋಟಲ್‌ ಕನ್ನಡ ಮಳಿಗೆಯಲ್ಲಿ ಕನ್ನಡ ಸಾಹಿತ್ಯ ಹಾಗೂ ಸಿನಿಮಾ ಸಂಬಂಧಿತ ಪುಸ್ತಕಗಳನ್ನು ಖರೀದಿ ಮಾಡಿದ್ದರು. ಇದರೊಂದಿಗೆ ಅವರು ಸಾಹಿತ್ಯಕ್ಕೆ ಸಂಬಂಧಿಸಿದ್ದ ಸಿಡಿಗಳನ್ನು ಖರೀದಿ ಮಾಡಿದ್ದರು. ತಾವು ತರಬೇತಿ ನೀಡುವ ವಿದ್ಯಾರ್ಥಿಗಳಿಗೆ ಓದಲು ಬೇಕಾದ ನೂರು ಪುಸ್ತಕ ಬೇಕು ರಿಯಾಯಿತಿ ದರದಲ್ಲಿ ಕೊಡಿ ಎಂದು ಕೇಳಿದ್ದರು. 75 ಪುಸ್ತಕಗಳ ಐದು ಸೆಟ್​ ಖರೀದಿಸಿದ್ದರಂತೆ. ಒಂದು ಸೆಟ್​ಗೆ 13 ಸಾವಿರದಂತೆ ಐದು ಸೆಟ್ ಪುಸ್ತಕಗಳಿಗೆ 65 ಸಾವಿರ ನೀಡಬೇಕಿತ್ತಂತೆ. ಪುಸ್ತಕ ಮತ್ತು ಸಿಡಿಗಳ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಕರೆ ಮಾಡಿದರೂ ರಿಸೀವ್‌ ಮಾಡುತ್ತಿಲ್ಲ. ಇದಲ್ಲದೆ ತನ್ನ ಮನೆಯ ವಿಳಾಸ ಕೂಡ ಬದಲಾಯಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next