ಬೆಂಗಳೂರು: ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿಯಂತಹ ಬ್ಲಾಕ್ ಬಾಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ(81) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರನ್ನು ಗಿರಿನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದ್ದ ಕಾರಣ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ
1981ರಲ್ಲಿ ಅನುಪಮ ಚಿತ್ರದ ಮೂಲಕ ಅವರು ನಿರ್ದೇಶನ ಕ್ಷೇತ್ರಕ್ಕೆ ಬಂದಿದ್ದರು. ‘ಶಹಬ್ಬಾಸ್ ವಿಕ್ರಮ್, ಕವಿರತ್ನ ಕಾಳಿದಾಸ, ಸತ್ಕಾರ ಹಾಗೂ ನಮ್ಮ ಊರ ದೇವತೆ, ಶಬರಿಮಲೆ ಸ್ವಾಮಿ ಅಯ್ಯಪ್ಪ, ‘ಅಂಜದ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು,ಕೊಲ್ಲೂರು ಶ್ರೀ ಮೂಕಾಂಬಿಕೆ , ಕಿಂದರಿ ಜೋಗಿ ಅವರ ನಿರ್ದೇಶನದ ಸೂಪರ್ ಹಿಟ್ ಚಿತ್ರಗಳು. 2007-08ರ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ವಿಜೇತರೂ ಆಗಿರುವ ರೇಣುಕಾ ಶರ್ಮಾ ಅವರ ರಕ್ತದ ಒತ್ತಡದಿಂದ ಬಳಲುತ್ತಿದ್ದರು.