Advertisement
ಈಗಾಗಲೇ ಸ್ಯಾಂಡಲ್ ವುಡ್‌ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಸಪ್ತಸಾಗರದಾಚೆ ಎಲ್ಲೋ(ಸೈಡ್ ಎ,ಬಿ) ಚಿತ್ರಗಳನ್ನು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಹೇಮಂತ್ ರಾವ್ ಮಾಸ್ ಹೀರೋ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದರಿಂದ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.
Related Articles
Advertisement
ವೈಶಾಖ್ ಗೌಡ ಎನ್ನುವವರು “ವಿಜೆ ಫಿಲಂಸ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿರುವ ವೈಶಾಖ್ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸೆಪ್ಟೆಂಬರ್ ನಂತರ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಅಂದಹಾಗೆ, ಸೌತ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ. ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಈ ಚಿತ್ರ ಮೂಡಿಬರುತ್ತಿದೆ.