ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ನಿರೂಪಕಿ ಅನುಶ್ರೀ ಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ನಡೆಯುತ್ತಿದೆ ಎಂಬಾ ಹೇಳಿಕೆಯ ಬೆನ್ನಲ್ಲೇ ರಾಗಿಣಿ, ಸಂಜನಾ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿ ಇದ್ದು ಇವರೊಂದಿಗೆ ಹಲವಾರು ಆರೋಪಿಗಳನ್ನು ಬಂಧಿಸಲಾಗಿತ್ತು.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ತರುಣ್ ನನ್ನು ವಿಚಾರಣೆ ನಡೆಸಿದ ಸಂದರ್ಭ ಆತ ಸಿಸಿಬಿ ಪೊಲೀಸರಿಗೆ ನಿರೂಪಕಿ ಅನುಶ್ರೀ ಅವರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ.
ಡ್ರಗ್ಸ್ ವಿಚಾರದಲ್ಲಿ ತನಿಖೆಗಾಗಿ ಮಂಗಳೂರು 4- 5 ಸಿಸಿಬಿ ಪೊಲೀಸರ ತಂಡ ಗುರುವಾರ ಬೆಂಗಳೂರಿಗೆ ತೆರಳಿತ್ತು.
ಇದನ್ನೂ ಓದಿ: ಪಂಜಾಬ್: ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು! ಕಟ್ಟಡ ಮಾಲೀಕ ಸೇರಿ ಹಲವರಿಗೆ ಗಾಯ
ಡ್ರಗ್ ಮಾಫಿಯಾ ಕುರಿತು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಈಗಾಗಲೇ ನಟ ಅಕುಲ್ ಬಾಲಾಜಿ, ದಿಗಂತ್, ಹಾಗೂ ಐಂದ್ರಿತಾ ಅವರನ್ನು ವಿಚಾರಣೆ ನಡೆಸಿದ್ದರು ಈಗ ನಿರೂಪಕಿ ಅನುಶ್ರೀ ಅವರಿಗೂ ವಿಚಾರಣೆಗಾಗಿ ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ.