Advertisement

ಅಂಗನವಾಡಿ ಬಲವರ್ಧನೆಗೆ ಶ್ರಮ

12:29 PM Jul 07, 2019 | Team Udayavani |

ಸಂಡೂರು: ಸರ್ಕಾರ ಯಾವುದೇ ರೀತಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂಥ ಕಾರ್ಯಮಾಡದೇ ಅವುಗಳನ್ನು ಬಲಪಡಿಸುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗುವ ಎಲ್ಲಾ ಸೌಲಭ್ಯಗಳ ಬಗ್ಗೆ ಗಮನಹರಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ತಿಳಿಸಿದರು.

Advertisement

ಅವರು ಶನಿವಾರ ಪಟ್ಟಣದಲ್ಲಿ 2 ದಿನಗಳ ಕಾಲ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿನಿರತರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಸರ್ಕಾರ ಯಾವುದೇ ರೀತಿಯಲ್ಲಿ ಅನ್ಯಾಯ ಮಾಡುವುದಿಲ್ಲ. ಪ್ರತಿಭಟನೆಯನ್ನು ಹಿಂಪಡೆಯಿರಿ, ನಿಮ್ಮ ಎಲ್ಲ ಬೇಡಿಕೆಗಳ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ಅಂಗನವಾಡಿ ಕಟ್ಟಡಗಳ ನಿರ್ಮಾಣ, ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ನಾಗರತ್ನಮ್ಮ ಮನವಿ ಪತ್ರ ಸಲ್ಲಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ., ಯುಕೆಜಿ ತಕ್ಷಣ ನಿಲ್ಲಿಸಬೇಕು. ಇಲ್ಲವೇ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಾಲೆಗಳಲ್ಲಿ ವಿಲೀನಗೊಳಿಸಬೇಕು ಎಂದು ವಿವಿಧ ಬೇಡಿಕೆಯ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟಲಕ್ಷ್ಮೀ, ಕವಿತ, ಯಲ್ಲಮ್ಮ, ಗಂಗಮ್ಮ, ಶಶಿಕಲಾ, ಪೂರ್ಣಚಂದ್ರ, ಲಲಕ್ಷ್ಮೀ, ಮಾರೆಕ್ಕ, ಕೆ.ಎಸ್‌. ರಾಧ, ಭಾರತಿ, ಕಲಾವತಿ, ಸರಸ್ವತಿ, ಎ.ಎಂ. ಮಲ್ಲಮ್ಮ, ಚಿಂತಾಮಣಿ, ಸುಮಂಗಳಮ್ಮ, ಈ. ಗಾಯಿತ್ರಿ ಇತರ ಹಲವಾರು ಕಾರ್ಯಕರ್ತೆಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next