Advertisement

ಕೊಪ್ಪಳ ಸಂಸದ ಸಂಗಣ್ಣ ಕರಡಿಗೂ ಕೋವಿಡ್ ಸೋಂಕು ದೃಢ

04:43 PM Aug 19, 2020 | sudhir |

ಕೊಪ್ಪಳ : ಕೊಪ್ಪಳ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರಿಗೂ ಕೋವಿದ್ ಸೋಂಕು ದೃಢಪಟ್ಟಿದ್ದು ಈ ಕುರಿತು ಸಂಸದರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Advertisement

ಸಂಸದರು ತಮ್ಮ ಟ್ವಿಟ್ಟರ್ ನಲ್ಲಿ ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಕೋವಿಡ್ ಸೋಂಕು ದ್ರುತಪಟ್ಟಿದ್ದು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.

ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕೋವಿಡ್ ಲಕ್ಷಣ ಬಂದಿದ್ದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಸಂಸದರು ಟ್ವೀಟ್ ಮಾಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next