ಗಂಗಾವತಿ : ನಗರದ ರಾಯಚೂರು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿ ಈಗಾಗಲೇ ಉದ್ಘಾಟನೆಗೊಂಡಿರುವ ರೈಲ್ವೆ ನಿಲ್ದಾಣಕ್ಕೆ ಸಂಸದ ಕರಡಿ ಸಂಗಣ್ಣ ಭೇಟಿ ನೀಡಿ ಪ್ರಯಾಣಿಕರಿಗೆ ಒದಗಿಸಲಾಗಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಗಂಗಾವತಿ ನಿಲ್ದಾಣದಿಂದ ಯಾಗಲಿ ಹುಬ್ಬಳ್ಳಿ ಮತ್ತು ಬೆಂಗಳೂರು ಯಶವಂತಪುರಕ್ಕೆ ರೈಲ್ವೆ ಸಂಚಾರವನ್ನು ಆರಂಭ ಮಾಡಿತ್ತು ಇಲ್ಲಿಗೆ ಆಗಮಿಸುವ ಪ್ರಯಾಣಿಕರಿಗೆ ಮೂಲಭೂತ ಸೌಕರ್ಯಗಳಾದ ಟಿಕೆಟ್ ಕೌಂಟರ್, ಶೌಚಾಲಯ ಶುದ್ಧ ಕುಡಿಯುವ ನೀರಿನ ನಳಗಳು ಮತ್ತು ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನ ಫ್ಯಾನಿನ ವ್ಯವಸ್ಥೆ ಇಲ್ಲ. ಜತೆಗೆ ಪ್ರಯಾಣಿಕರು ತಮ್ಮ ವಾಹನಗಳನ್ನು ಬಿಡಲು ಸೂಕ್ತ ಪಾರ್ಕಿಂಗ್ ವ್ಯವಸ್ಥೆ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಅನಾನುಕೂಲವಾಗಿದೆ ಈ ಕುರಿತು ಸಂಸದರಿಗೆ ದೂರು ಸಲ್ಲಿಸಲಾಗಿತ್ತು.
ರೈಲ್ವೆ ನಿಲ್ದಾಣಕ್ಕೆ ಸಂಸದ ಸಂಗಣ್ಣ ಕರಡಿ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು ನಿಲ್ದಾಣದಲ್ಲಿ ಸೂಕ್ತ ಭದ್ರತಾ ಸಿಬ್ಬಂದಿಯಿಲ್ಲ ಜೊತೆಗೆ ಈಗಾಗಲೇ ಪ್ರಯಾಣಿಕರಿಗೆ ಬೇಕಾಗಿರುವ ಸೌಲಭ್ಯಗಳ ಕುರಿತು ಪತ್ರದ ಮೂಲಕ ಮೇಲಾಧಿಕಾರಿ ಸೂಚನೆ ನೀಡಲಾಗಿದೆ ಆದರೂ ಸೌಲಭ್ಯಗಳನ್ನು ಕಲ್ಪಿಸದೆ ಇರುವುದು ಕಂಡುಬಂದಿದೆ ಕೂಡಲೇ ಪ್ರಯಾಣಿಕರ ಅನುಕೂಲಕ್ಕೆ ಎಲ್ಲ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ : ತರಣ್ ಕಪೂರ್ ಪ್ರಧಾನಿಗೆ ಸಲಹೆಗಾರ; ಕೇಂದ್ರ ಸಂಪುಟ ಸಮಿತಿ ಅನುಮೋದನೆ
ಮುಂಬರುವ ದಿನಗಳಲ್ಲಿ ಗಂಗಾವತಿಯಿಂದ ದೇಶದ ವಿವಿಧ ಪ್ರಮುಖ ನಗರಗಳಿಗೆ ರೈಲ್ವೆ ಸಂಚಾರ ಆರಂಭಿಸಲಾಗುತ್ತದೆ ಜತೆಗೆ ಕಿಷ್ಕಿಂದಾ ಅಂಜನಾದ್ರಿಯಿಂದ ಅಯೋಧ್ಯೆ ಸೇರಿದಂತೆ ಪ್ರಮುಖ ಕ್ಷೇತ್ರಗಳಿಗೆ ರೈಲ್ವೆ ಸಂಚಾರ ವ್ಯವಸ್ಥೆ ಈಗಾಗಲೇ ಕೇಂದ್ರ ರೈಲ್ವೆ ಸಚಿವರು ಸೇರಿದಂತೆ ರೈಲ್ವೆ ಇಲಾಖೆ ಬೋರ್ಡಿನ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಶೀಘ್ರವೇ ಕೇಂದ್ರ ಸರ್ಕಾರ ನೂತನ ರೈಲ್ವೆ ಸಂಚಾರಿ ಮಾರ್ಗಗಳನ್ನು ಮಂಜೂರಿ ಮಾಡುವ ನಿರೀಕ್ಷೆಯಿದೆ ಎಂದರು.
ಈ ಸಂದರ್ಭದಲ್ಲಿ ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಇದ್ದರು .