Advertisement

ಶನಿವಾರ ಮಂಗಳೂರಿಗೆ ಭೇಟಿ, ಪಿಣರಾಯಿ;ಮಂಗಳೂರು ಬಂದ್, ಸಂಘ ಪರಿವಾರ ಕಿಡಿ

09:01 PM Feb 24, 2017 | Team Udayavani |

ಕೋಝಿಕ್ಕೋಡ್/ಮಂಗಳೂರು:ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ, ಶನಿವಾರ ಮಂಗಳೂರಿನಲ್ಲಿ ನಡೆಯಲಿರುವ ಕೋಮು ಸೌಹಾರ್ದ ರಾಲಿಯಲ್ಲಿ ಪಾಲ್ಗೊಳ್ಳುವುದು ಖಚಿತ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

Advertisement

ಸಿಎಂ ಪಿಣರಾಯಿ ವಿಜಯನ್ ಅವರು ಮಂಗಳೂರಿಗೆ ಭೇಟಿ ನೀಡಬಾರದು ಎಂದು ವಿರೋಧಿಸಿ ಸಂಘ ಪರಿವಾರದ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪಿಣರಾಯಿ ಭೇಟಿ ವಿರೋಧಿಸಿ ವಿಶ್ವಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಗೆ ಬೆಂಬಲ ವ್ಯಕ್ತಪಡಿಸಿರುವುದಾಗಿ ಬಿಜೆಪಿ ತಿಳಿಸಿದೆ. ಅಲ್ಲದೇ ಮಂಗಳೂರು ಬಂದ್ ಗೆ ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಲವಾರು ಹಿಂದೂಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next