ಕೆ.ಆರ್.ನಗರ: ಪಟ್ಟಣದ ಕನಕ ಗುರುಪೀಠದ ಆವಣರದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ನಿರ್ಮಿಸಿರುವ ಸಂಗೊಳ್ಳಿ ರಾಯಣ್ಣ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ಸೆ.23ರಂದು ಭಾನುವಾರ ಏರ್ಪಡಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.
ಸಂಘದ ಪದಾಧಿಕಾರಿಗಳೊಂದಿಗೆ ಸುಮಾರು 2.5 ಕೋಟಿ ರೂಗಳಲ್ಲಿ ನಿರ್ಮಾಣ ಮಾಡಿರುವ ಭವನದ ಕಾಮಗಾರಿಯನ್ನು ಪರಿಶೀಲಿಸಿ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 6ಕ್ಕೆ ಗೃಹ ಪ್ರವೇಶ, ಗಣಪತಿ ಹೋಮ ಸೇರಿದಂತೆ ಇತರ ದೇವತಾ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.
ಮಧ್ಯಾಹ್ನ 2ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾಗಿನೆಲೆ ಕನಕ ಗುರು ಪೀಠದ ನಿರಂಜಾನಂದಸ್ವಾಮೀಜಿ, ಕೆ.ಆರ್.ನಗರ ಶಾಖಾ ಮಠದ ಶಿವಾನಂದಪುರಿ ಸ್ವಾವೀಜಿ ಮತ್ತು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾವೀಜಿಗಳು ದಿವ್ಯ ಸಾನ್ನಿದ್ಯ ವಹಿಸಲಿದ್ದಾರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ ಪ್ರಸ್ತಾವಿಕ ಭಾಷಣ ಮಾಡಲಿದ್ದು, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಸಚಿವರಾದ ಬಂಡೆಪ್ಪಕಾಶಂಪುರ, ಆರ್.ಶಂಕರ್, ಪುಟ್ಟರಂಗಶೆಟ್ಟಿ, ಸಾ.ರಾ.ಮಹೇಶ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ವರ್ತೂರು ಪ್ರಕಾಶ್, ಸಿ.ಹೆಚ್.ಜಯಶಂಕರ್, ಶಾಸಕರಾದ ಅನಿಲ್‌ಚಿಕ್ಕಮಾದು, ಆರ್.ಧರ್ಮಸೇನಾ, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ಕೆ.ಸಿ.ಪುಟ್ಟಸಿದ್ದಶೆಟ್ಟಿ, ಜಿ.ಪಂ. ಪಕ್ಷ ನಾಯಕ ಡಿ.ರಶಂಕರ್, ಸದಸ್ಯ ಅಮಿತ್.ವಿ.ದೇವರಹಟ್ಟಿ, ಕೆಪಿಸಿಸಿ ವಕ್ತಾರೆ ಐಶ್ವರ್ಯಮಹದೇವ್ ಮುಖ್ಯ ಅತಿಥಿಗಳಾಗಿ ಭಾಗವಹಿದಲಿದ್ದಾರೆ ಎಂದರು.
ವಿಶೇಷ ಆಹ್ವಾನಿತರಾಗಿ ಟಿಎಪಿಸಿಎಂಎಸ್ ಎಸ್.ಸಿದ್ದೇಗೌಡ, ಜಿ.ಪಂ. ಸದಸ್ಯರಾದ ಅಚ್ಚುತಾನಂದ, ನಾಗರತ್ನ, ತಾಪಂ ಅಧ್ಯಕ್ಷ ಎಚ್.ಟಿ.ಮಂಜುನಾಥ್, ಪುರಸಭಾಧ್ಯಕ್ಷೆ ಹರ್ಷಲತಾ, ಉಪಾಧ್ಯಕ್ಷೆ ಪಾರ್ವತಿ, ತಾಪಂ ಸಾಯಿ§ ಸಮಿತಿ ಅಧ್ಯಕ್ಷ ಕೆ.ಪಿ.ಯೋಗೇಶ್, ಸದಸ್ಯರಾದ ಜಿ.ಎಸ್.ಮಂಜುನಾಥ್, ಲೋಕೇಶ್, ಸಾಕಮ್ಮ, ರತ್ನಮ್ಮ, ಮಹದೇವ್, ಜಿಪಂ ಮಾಜಿ ಅಧ್ಯಕ್ಷ ಸಿ.ಜೆ.ದ್ವಾರಕೀಶ್ ಭಾಗವಹಿಸಲಿದ್ದಾರೆ ಎಂದರು.
ಕೆಪಿಸಿಸಿ ವಕ್ತಾರೆ ಐಶ್ವರ್ಯ, ನಿವೃತ್ತ ಆರೋಗ್ಯಾ ಧಿಕಾರಿ ಡಾ.ಎಸ್.ಎಂ.ಮಾಲೇಗೌಡ ತಲಾ 2ಲಕ್ಷ ರೂ. ಆರ್ಥಿಕ ಸಹಕಾರ ನೀಡಿದರು. ಕುರುಬರ ಸಂಘದ ತಾಲೂಕು ಅಧ್ಯಕ್ಷ ಜೆ.ಶಿವಣ್ಣ, ಪದಾ ಧಿಕಾರಿಗಳಾದ ಕೋಳಿಪ್ರಕಾಶ್, ರಾಮಕೃಷ್ಣೇಗೌಡ, ಕೆ.ಎಂ.ಶ್ರೀನಿವಾಸ್, ಎಂ.ಎಸ್.ಅನಂತು, ರಂಗೇಶ್‌ಕುಮಾರ್, ಬಿ.ಎಂ.ನಾಗರಾಜು, ಅಪ್ಪಾಜಿಗೌಡ, ಬಿ.ಎಂ.ಗಿರೀಶ್, ಪುರಸಭಾ ಸದಸ್ಯ ಕೆ.ಪಿ.ಪ್ರಭುಶಂಕರ್ ಹಾಜರಿದ್ದರು.
ಸರ್ಕಾರ ಮತ್ತು ಸಮುದಾಯದ ಸಹಕಾರದಿಂದ ಭವನವನ್ನು ನಿರ್ಮಾಣ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಸಮುದಾಯದ ಅಧ್ಯಕ್ಷರನ್ನು ಸಂಘದ ವತಿಯಿಂದ ಆಹ್ವಾನಿಸಲಾಗಿದ್ದು, ಮದುವೆ ಸೇರಿದಂತೆ ಇತರ ಶುಭ ಸಮಾರಂಭಗಳಿಗೆ ಕಡಿಮೆ ದರದಲ್ಲಿ ಭವನವನ್ನು ಬಾಡಿಗೆಗೆ ನೀಡಲಾಗುತ್ತದೆ.
-ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಾಧ್ಯಕ್ಷ