Advertisement

ಸಂಗೊಳ್ಳಿ ರಾಯಣ್ಣ ನಂಬಿಕೆ-ವಿಶ್ವಾಸದ ಪ್ರತೀಕ: ಸಿಎಂ ಸಿದ್ದರಾಮಯ್ಯ

05:15 PM Aug 27, 2024 | Team Udayavani |

ಉದಯವಾಣಿ ಸಮಾಚಾರ
ಮೂಡಲಗಿ: “ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತನಾಗಿ ಜನರ ಹƒದಯದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾನೆ. ಅಂಥ ದೇಶಭಕ್ತನ ಪ್ರತಿಮೆಯನ್ನು ಒಂದೇ ದಿನ ನಾಲ್ಕು ಕಡೆಯಲ್ಲಿ ಅನಾವರಣ ಮಾಡುತ್ತಿರುವುದು ಹೆಮ್ಮೆ ಎನಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ತಾಲ್ಲೂಕಿನ ಯಾದವಾಡದಲ್ಲಿ ಮುಧೋಳ ಲೋಕಾಪುರ ರಸ್ತೆಯಲ್ಲಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಿತಿಯವರು ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನು ನಂಬಿಕೆ, ವಿಶ್ವಾಸದ ಪ್ರತೀಕನಾಗಿದ್ದನು ಎಂದರು.

ಸಂಗೊಳ್ಳಿ ರಾಯಣ್ಣನು ಕಿತ್ತೂರ ರಾಣಿ ಚನ್ನಮ್ಮಳ ಬಲಗೈ ಬಂಟನಾಗಿದ್ದವನು. ಬ್ರಿಟಿಷರಿಗೆ ಸಿಂಹಸ್ವಪ್ನನಾಗಿ ಸ್ವಂತ ಸೇನೆ ನಿರ್ಮಿಸಿದ್ದ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಶ್ರೇಷ್ಠ ದೇಶಪ್ರೇಮಿಯೆನಿಸಿ ಯವಕರಿಗೆ ಪ್ರೇರಣೆಯಾಗಿದ್ದಾರೆ ಎಂದರು.

182 ಕೋಟಿ ವೆಚ್ಚದಲ್ಲಿ ಸಂಗೊಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ ನಿರ್ಮಿಸಿದ್ದು, ಅದರ ಮೂಲಕ ಮಕ್ಕಳಲ್ಲಿ ಧೈರ್ಯ, ನಂಬಿಕೆ ಮತ್ತು ವಿಶ್ವಾಸದ ಪಾಠ ಕಲಿಕೆಯಾಗಬೇಕು. ಸಂಗೊಳ್ಳಿ ರಾಯಣ್ಣನ ತರಹ ಶೂರರು ನಾಡಿನಲ್ಲಿ ಬೆಳೆಯಬೇಕು. ಸಂಗೊಳ್ಳಿ ರಾಯಣ್ಣನ ರೀತಿಯಲ್ಲಿ ಪ್ರತಿಯೊಬ್ಬರು ದೇಶ ಮತ್ತು ಸಮಾಜವನ್ನು ಪ್ರೀತಿಸಬೇಕು ಎಂದರು.

ಹುಲಜಂತಿ ಮಾಳಿಂಗರಾಯ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಸಚೇತಕ ಅಶೋಕ‌ ಪಟ್ಟಣ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ನಿಂಗಪ್ಪ ಕುರಬೇಟ, ಕಾಂಗ್ರೆಸ್‌ ಮುಖಂಡ ಮೃಣಾಲ ಹೆಬ್ಟಾಳಕರ, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ| ರಾಜೇಂದ್ರ ಸಣ್ಣಕ್ಕಿ, ಲಕ್ಷ್ಮಣರಾವ ಚಿಂಗಳೆ, ಯಾದವಾಡ ಗ್ರಾಪಂ ಅಧ್ಯಕ್ಷ ಬಸವರಾಜ ಭುತಾಳಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಮಿಟಿಯವರು, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next