ಬೈಲಹೊಂಗಲ: ಈ ಬಾರಿ ಸಂಗೊಳ್ಳಿ ಉತ್ಸವವನ್ನು ಜ.17 ಹಾಗೂ 18 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ತಿಳಿಸಿದರು.
Advertisement
ಸಂಗೊಳ್ಳಿ ರಾಯಣ್ಣ ಸ್ಮಾರಕ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಸಾನ್ನಿಧ್ಯ ವಹಿಸಿ ಮಾತನಾಡಿದ ಗುರುಲಿಂಗ ಶಿವಾಚಾರ್ಯರು, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ ಸೇರಿದಂತೆ ಎಲ್ಲರೂ ಜಾತ್ಯತೀತವಾಗಿ ಗುರುತಿಸಲ್ಪಡುವಂತಹವರು. ಈ ಬಾರಿ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವುದು ಸಂತಸಕರ ಸಂಗತಿ ಎಂದರು.
ಮುಂಬರುವ ವರ್ಷಗಳಲ್ಲಿ ಜನವರಿ 12 ಹಾಗೂ 13 ರಂದೇ ನಿಯಮಿತವಾಗಿ ಸಂಗೊಳ್ಳಿ ಉತ್ಸವವನ್ನು ಆಚರಿಸಬೇಕು ಎಂದು ಸಲಹೆ ನೀಡಿದರು. ಉತ್ಸವದ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣನ ಕುರಿತು ಏರ್ಪಡಿಸಲಾಗುವ ವಿಚಾರಸಂಕಿರಣದಲ್ಲಿಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಿವಾಚಾರ್ಯರು ಕರೆ ನೀಡಿದರು.
ಮುಖ್ಯಮಂತ್ರಿಗಳಿಗೆ ಉತ್ಸವದಲ್ಲಿ ಪೌರಸನ್ಮಾನ ನೀಡಬೇಕು; ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು; ಉತ್ತಮ ಕಲಾತಂಡಗಳನ್ನು ಆಹ್ವಾನಿಸಬೇಕು ಹಾಗೂ ಕುಸ್ತಿ ಸ್ಪರ್ಧೆ ಆಯೋಜಿಸಬೇಕು ಎಂದು ಸಾರ್ವಜನಿಕರು ಸಲಹೆಗಳನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಸಂಗೊಳ್ಳಿಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಲ್ಲೇಶ ಹೊರಪೇಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ ಕಂಕಣವಾಡಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸತ್ಯನಾರಾಯಣ ಭಟ್ ಮತ್ತಿತರರು ಉಪಸ್ಥಿತರಿದ್ದರು.