ಚಿಕ್ಕಬಳ್ಳಾಪು : ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಅ.28ರಂದು ನಡೆಯಲಿದ್ದು ಕೋವಿಡ್-19 ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತಭವನದಆಡಿಟೋರಿಯಂನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಂಬಂ« ಭಾರತ ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿ
ಪ್ರಕಟಿಸಿದೆ. ಹೀಗಾಗಿ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು. ಮತಗಟ್ಟೆ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಬೇಕು ಎಂದು ಸೂಚಿಸಿದರು.
ಸೌಕರ್ಯ ಕಲ್ಪಿಸಿ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆ ಮತಗಟ್ಟೆ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ ದಾರರಿಗೆ ಥರ್ಮಾಮೀಟರ್ ಮೂಲಕ ತಪಾಸಣೆ ಮಾಡಬೇಕು. ಮತಗಟ್ಟೆ ಕೇಂದ್ರಗಳಲ್ಲಿಕುಡಿಯುವ ನೀರು, ವಿದ್ಯುತ್, ರ್‍ಯಾಂಪ್ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿ ಮತಗಟ್ಟೆಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನುಕೈಗೊಳ್ಳಬೇಕು. ಮತದಾರರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮತಗಟ್ಟೆಕೇಂದ್ರಗಳಲ್ಲಿ ಹೆಚ್ಚು ಜನ ಸೇರದಂತೆ ಮತಗಟ್ಟೆ ಅಧಿಕಾರಿಗಳುಕ್ರಮ ವಹಿಸಬೇಕು
. –ಆರ್.ಲತಾ, ಜಿಲ್ಲಾಧಿಕಾರಿ