Advertisement
ಬುಧವಾರದಿಂದ ಪಾಲಿಕೆ ವ್ಯಾಪ್ತಿಯ ಎಲ್ಲ ಕಚೇರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸ್ಯಾನಿಟೈಸರ್ ಸಿಂಪಡಣೆ ಮಾಡಲು ಬಿಬಿಎಂಪಿ ಆಯುಕ್ತರಾದ ಬಿ.ಎಚ್.ಅನಿಲ್‌ಕುಮಾರ್ ಸೂಚನೆ ನೀಡಿ ದ್ದಾರೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
Related Articles
Advertisement
ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವ ಮದುವೆಗಳು ಸೇರಿದಂತೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿ ತಾವೇ ಹೊರಡಿಸಿರುವ ಅಧಿಸೂಚನೆಯನ್ನು ಉಲ್ಲಂ ಸಿ ಮಾ.15ರಂದು ಬೆಳಗಾವಿಯಲ್ಲಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಕ್ಕೆ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ. ನರಸಿಂಹಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸರ್ಕಾರದ ಅಧಿಸೂಚನೆ ಉಲ್ಲಂ ಸಿ ಮುಖ್ಯಮಂತ್ರಿಯವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇವರ ಜೊತೆಗೆ ಕೆಲವು ಶಾಸಕರು, ಸಚಿವರು, ಕೇಂದ್ರದ ಮಂತ್ರಿಗಳು ಇದ್ದರು. ಆದ್ದರಿಂದ ಈ ನಿಟ್ಟಿನಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಶಂಕಿತರು ಎಸ್ಕೇಪ್ ಆದ್ರೆ ಕ್ರಮ: ಕೊರೊನಾ ಶಂಕಿತರು ಚಿಕಿತ್ಸೆ ಪಡೆಯದೆ ಪರಾರಿಯಾದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮ ಪತ್ರಿನಿಧಿಗಳ ಜತೆ ಮಾತನಾಡಿದ ಅವರು, ಕೊರೊನಾ ಶಂಕಿತರು ಮುನ್ನೆಚ್ಚರಿಕೆ ವಹಿಸಬೇಕು.
ಸಾಮಾಜಿಕ ಜವಾಬ್ದಾರಿ ಅರಿತು ಚಿಕಿತ್ಸೆ ಪಡೆದುಕೊಳ್ಳಬೇಕೇ ವಿನ: ಪರಾರಿ ಆಗಬಾರದು. ಒಂದು ವೇಳೆ ಪರಾರಿಯಾಗುವುದು ಗೊತ್ತಾದರೆ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಡಿಸಿಪಿ ಇಶಾ ಪಂಥ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದ್ದು, ಆರೋಗ್ಯ ಇಲಾಖೆ ಸೂಚನೆಯಂತೆ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಹೇಳಿದ್ದಾರೆ.