ಬೆಂಗಳೂರು : ಮಾದಕ ದ್ರವ್ಯ ಪೂರೈಕೆ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿಯನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೋಲೀಸರ ವಶಕ್ಕೆ ಒಪ್ಪಿಸಲು ಆದೇಶ ನೀಡಿದೆ.
ಸ್ಯಾಂಡಲ್ ವುಡ್ ಡ್ರಗ್ ಜಾಲದ ಸಂಪೂರ್ಣ ತನಿಖೆಗಾಗಿ ಸೆಪ್ಟೆಂಬರ್ 16ರ ವರೆಗೆ ನಟಿಯನ್ನು ಸಿಸಿಬಿ ಪೋಲೀಸರ ವಶಕ್ಕೆ ನೀಡಲು ಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ: 14 ದಿನಗಳ ಕಾಲ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ನಟಿ ರಾಗಿಣಿ
ಈಗಾಗಲೇ ನ್ಯಾಯಾಂಗ ಬಂಧನದ ಅವಧಿ ಮುಗಿದ ಪರಿಣಾಮ ಸಿಸಿಬಿ ಪೊಲೀಸರು ಇಂದು ಎಲ್ಲಾ ಆರೋಪಿಗಳನ್ನು ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದರು. ಬೆಂಗಳೂರಿನ ಒಂದನೇ ಎಸಿಎಂಎಂ ಕೋರ್ಟ್ ನಟಿ ಸಂಜನಾ ಅವರನ್ನು ಇನ್ನೂ ವಿಚಾರಣೆ ನಡೆಸಬೇಕಾದ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಗೆ ನೀಡಿದ್ದು ಹಾಗೆ ನಟಿ ರಾಗಿಣಿ ಹಾಗೂ ಉಳಿದ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದೆ.
ಇದನ್ನೂ ಓದಿ : ‘ಝೀರೋ’ದಿಂದ ಬದುಕು ಪ್ರಾರಂಭಿಸಿದ ಸುಗಾ ಇದೀಗ ಅಬೆಯ ಉತ್ತರಾಧಿಕಾರಿ