ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ಸಂಸದ, ಪಕ್ಷದ ವಕ್ತಾರ ಸಂಜಯ್ ರಾವತ್ ಅವರನ್ನು ಮಧ್ಯರಾತ್ರಿ ಬಂಧಿಸಲಾಗಿದ್ದು, ಇದನ್ನು ವಿರೋಧಿಸಿ ಶಿವಸೇನಾ ಕಾರ್ಯಕರ್ತರು ಸೋಮವಾರ ಮುಂಬಯಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಅಗಲಿದ ಚೇತನ : ಟಿ. ಮೋಹನದಾಸ್ ಪೈ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಗಣ್ಯರ ಸಂತಾಪ
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ಶಿವಸೇನಾ ಸಂಸದ ರಾವತ್ ಅವರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಲೋಕಸಭಾ ಕಲಾಪದಲ್ಲಿ ಕೋಲಾಹಲವೆಬ್ಬಿಸಿರುವ ಘಟನೆ ನಡೆದಿದೆ.
ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ಪಿಎಂಎಲ್ ಎ ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಮುಂಬೈನ ಜೆಜೆ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಗಿತ್ತು.
ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಹಾಗೂ ಆಸ್ಪತ್ರೆ ಸುತ್ತಮುತ್ತ 200ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ತನಿಖೆಗೆ ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ ಎರಡು ಬಾರಿ ರಾವತ್ ಗೆ ಸಮನ್ಸ್ ನೀಡಿತ್ತು, ಆದರೆ ಗೈರುಹಾಜರಾಗಿದ್ದರು. ಭಾನುವಾರ ರಾತ್ರಿ ಇ.ಡಿ ಅಧಿಕಾರಿಗಳು ರಾವತ್ ನಿವಾಸದ ಮೇಲೆ ದಾಳಿ ನಡೆಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.