Advertisement
ಕಬಕ ಗ್ರಾಮದ ಮುರ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆದ “ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರ ಹತ್ತಾರು ಜನಪರ ಕಾರ್ಯಕ್ರಮಗಳನ್ನು ನೀಡಿದೆ. ಆದರ್ಶ ಗ್ರಾ.ಪಂ. ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದರು.
Related Articles
Advertisement
60 ಅಹವಾಲು ಸ್ವೀಕಾರಅಪರ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ರಸ್ತೆ, ವಸತಿ, ನಿವೇಶನ, ಮೆಸ್ಕಾಂ, ಕೆಎಸ್ಸಾರ್ಟಿಸಿ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿ ಒಟ್ಟು 60 ಅರ್ಜಿ ಗಳನ್ನು ಸ್ವೀಕರಿಸಿದರು. ಕಾಲನಿಗೆ ಭೇಟಿ
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಪರ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣ ಮೂರ್ತಿ ಹಾಗೂ ಅಧಿಕಾರಿಗಳು ಶೇವಿರೆ ಎಸ್‌ಸಿ-ಎಸ್‌ಟಿ ಕಾಲನಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ಮೂಲೆಕಾಳು ಪೂವಮ್ಮ ಅವರ ಮನೆಗೆ ಭೇಟಿ ನೀಡಿ ಎಂಡೋಸಲ್ಫಾನ್ ಪೀಡಿತೆ ಕೃತಿಕಾ ಅವರೊಂದಿಗೆ ಮಾತುಕತೆ ನಡೆಸಿದರು.