Advertisement
ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಕೃತಿಯನ್ನು ಬಿಡುಗಡೆ ಮಾಡಿದರು. ಸುರûಾ ದಂತ ಚಿಕಿತ್ಸಾಲಯ ಹೊಸಂಗಡಿ ಇದರ ವಿಂಶತಿಯ ಸಂಭ್ರಮದ ಜತೆಗೆ ನಡೆದ ಈ ಕಾರ್ಯ ಕ್ರಮದಲ್ಲಿ ಖ್ಯಾತ ಕುಟುಂಬ ವೈದ್ಯ ಮತ್ತು ವೈದ್ಯ ಸಾಹಿತಿ ಡಾ| ರಮಾನಂದ ಬನಾರಿ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್‌ನ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಭಾಗವಹಿಸಿದ್ದರು.
Related Articles
Advertisement
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ| ರಮಾನಂದ ಬನಾರಿ ಅವರು ಮಾತನಾಡುತ್ತಾ ಡಾ| ಮುರಳಿ ಅವರು ಬರೆದ “ಸಂಜೀವಿನಿ’ ಕೃತಿ, ವೈದ್ಯ ಲೋಕದ ಅಪರೂಪದ ಕೃತಿಯಾಗಿದ್ದು ಜನ ಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವಲ್ಲಿ ಅತೀ ನಿರ್ಣಾಯಕ ಪಾತ್ರ ವಹಿಸಬಲ್ಲುದು ಎಂದರು.ರಾಮಾಯಣದ ಸಮಯದಲ್ಲಿ ರಾಮ-ಲಕ್ಷ್ಮಣರಿಗೆ ಹನುಮಂತ ಬೆಟ್ಟದ ಜತೆಗೆ ಹೊತ್ತು ತಂದ ಸಂಜೀ ವಿನಿ ಔಷಧ ಅಮೃತವಾದಂತೆ ಈ “ಸಂಜೀವಿನಿ’ ಕೃತಿ ಕೂಡಾ ಜನ ಸಾಮಾನ್ಯರಿಗೆ ಮತ್ತು ಮನೆ ಮನೆಗೂ ತಲುಪಲಿ ಎಂದು ಶುಭ ಹಾರೈಸಿದರು. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಈ ಕೃತಿ ಬಹಳ ಮುಖ್ಯ ಭೂಮಿಕೆ ವಹಿಸಲಿದೆ ಎಂದರು.
ಹರ್ಷಾದ್ ವರ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಚೂಂತಾರು ಪ್ರತಿಷ್ಠಾನದ ಅಧ್ಯಕ್ಷ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಉಪಸ್ಥಿತರಿದ್ದರು.
ರಾಮಕೃಷ್ಣ ಭಟ್ ಚೊಕ್ಕಾಡಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಿರಿ, ಸ್ವಸ್ತಿ, ಸ್ನೇಹಾ ಪ್ರಾರ್ಥನೆ ಮಾಡಿದರು. ಮಹೇಶ್ ಚೂಂತಾರು ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಡಾ| ರಾಜಶ್ರೀ ಮೋಹನ್, ಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗ್ಗಡೆ, ವೈದ್ಯ ಸಾಹಿತಿ ಡಾ| ಮೀರಾ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಮುಂತಾದವರು ಉಪಸ್ಥಿತರಿದ್ದರು.