Advertisement

Rajasthan Royals; ಮೊದಲ ಸೋಲನುಭವಿಸಿದ ಸಂಜು ಸ್ಯಾಮ್ಸನ್ ಗೆ ಭಾರಿ ದಂಡ ವಿಧಿಸಿದ ಬಿಸಿಸಿಐ

11:27 AM Apr 11, 2024 | Team Udayavani |

ಜೈಪುರ: ಸತತ ಜಯ ಗಳಿಸಿ ಬೀಗುತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡವು ಬುಧವಾರ ಮೊದಲ ಸೋಲನುಭವಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಪಡೆಯು 17ನೇ ಸೀಸನ್ ನ ಮೊದಲ ಸೋಲು ಕಂಡಿದೆ.

Advertisement

ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

“ಇದು ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಋತುವಿನ ಮೊದಲ ಅಪರಾಧವಾಗಿದ್ದು, ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಸ್ಯಾಮ್ಸನ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ.

ಜೈಪುರದಲ್ಲಿ ಉತ್ತಮ ಫಾರ್ಮ್ ಮುಂದುವರಿಸಿದ ಸಂಜು ಸ್ಯಾಮ್ಸನ್ 38 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರು. ರಿಯಾನ್ ಪರಾಗ್ ಅವರು 78 ರನ್ ಗಳಿಸಿ ನೆರವಾದರು. ರಾಯಲ್ಸ್ 3 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next