ಟ್ರಿನಿಡಾಡ್; ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಇಂದಿನಿಂದ ಆರಂಭವಾಗಲಿದ್ದು, ಭಾರತದ ವಿಕೆಟ್ ಕೀಪರ್ ಬ್ಯಾಟ್ಸಮನ್ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇನ್ನೂ ಫಿಟ್ ಆಗದ ಕೆ.ಎಲ್.ರಾಹುಲ್ ಬದಲಿಗೆ ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿದೆ.
ಏಕದಿನ ಸರಣಿಯಿಂದ ಹೊರಗುಳಿದಿದ್ದ ಕೆ.ಎಲ್.ರಾಹುಲ್ ಅವರನ್ನು ಫಿಟ್ ನೆಸ್ ಆಧಾರದಲ್ಲಿ ಟಿ20 ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ವಿಂಡೀಸ್ ಗೆ ಪ್ರಯಾಣಿಸುವ ಮೊದಲೇ ರಾಹುಲ್ ಗೆ ಕೋವಿಡ್ ಪಾಸಿಟಿವ್ ಆಗಿತ್ತು. ಹೀಗಾಗಿ ಆಯ್ಕೆಯಾಗಿಲ್ಲ.
ಏಕದಿನ ಸರಣಿಗೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್ ರನ್ನು ಟಿ20 ತಂಡಕ್ಕೆ ಪರಿಗಣಿಸಿರಲಿಲ್ಲ. ಇದೀಗ ರಾಹುಲ್ ಬದಲಿಗೆ ಅವಕಾಶ ಸಿಕ್ಕಿದ್ದು, ಆಡುವ ಬಳಗದಲ್ಲಿ ಚಾನ್ಸ್ ಸಿಗುವುದೇ ಕಾದು ನೋಡಬೇಕಿದೆ.
ಇದನ್ನೂ ಓದಿ:ಒಂದೇ ಸಿರಿಂಜ್ ಬಳಸಿ 39 ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿದ ಆರೋಗ್ಯ ಸಿಬ್ಬಂದಿ ಬಂಧನ
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯ ಇಂದು ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಟ್ರಿನಿಡಾಡ್ ನ ತರೌಬಾದ ಬ್ರಿಯಾನ್ ಲಾರಾ ಸ್ಟೇಡಿಯಂ ನಲ್ಲಿ ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್,ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.