Advertisement

ಕಲ್ಲಹಳ್ಳಿ ಶಾಲೆಯಲ್ಲಿ ಸಂಕ್ರಾಂತಿ ಸಡಗರ

09:40 PM Jan 15, 2022 | Team Udayavani |

ಶಿವಮೊಗ್ಗ: ಕಲ್ಲಹಳ್ಳಿಯ ಪ್ರಿಯದರ್ಶಿನಿ ಶಾಲೆಯಲ್ಲಿ ಶುಕ್ರವಾರ ಸಂಭ್ರಮದ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ರಂಗೋಲಿ ಬಿಡಿಸಿ, ಕಬ್ಬಿನ ಜಲ್ಲೆ ಇಟ್ಟು ಕೊರೋನಾದ ನಿಯಮಗಳ ನಡುವೆಯೇ ಭಾರತೀಯ ಸಂಸ್ಕೃತಿ ಅಡಿಯಲ್ಲಿ ಮಕರ ಸಂಕ್ರಾಂತಿ ಆಚರಿಸಲಾಯಿತು.

Advertisement

ಮಕ್ಕಳೆಲ್ಲರೂ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದರು. ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಎನ್‌. ರಮೇಶ್‌ ಮಾತನಾಡಿ, ಮಕ್ಕಳು ಕೇವಲ ಅಂಕಗಳಿಗೆ ಮಾತ್ರ ಜೋತು ಬೀಳದೇ ಎಲ್ಲಾ ರೀತಿಯ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎಂಬ ಹಿನ್ನೆಲೆಯಲ್ಲಿ ನಮ್ಮ ಶಾಲೆಯಲ್ಲಿ ಕೆಲವು ಸಾಂಪ್ರದಾಯಿಕ ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದೇವೆ.

ಶಿಕ್ಷಣದ ಜೊತೆಗೆ ಹಬ್ಬಗಳ ಮಹತ್ವವನ್ನು ಮಕ್ಕಳಿಗೆ ತಿಳಿಸುತ್ತೇವೆ ಎಂದರು. ಮುಖ್ಯ ಅತಿಥಿಯಾಗಿದ್ದ ಕಾಂಗ್ರೆಸ್‌ ಸೇವಾದಳದ ಜಿಲ್ಲಾಧ್ಯಕ್ಷ ವೈ.ಎಚ್‌. ನಾಗರಾಜ್‌ ಮಾತನಾಡಿ, ಮಕರ ಸಂಕ್ರಾಂತಿ ಹಿಂದೂ ಸಂಪ್ರದಾಯದಲ್ಲಿ ಬರುವ ಪವಿತ್ರ ಹಬ್ಬವಾಗಿದೆ. ಇದನ್ನು ಸುಗ್ಗಿಯ ಹಬ್ಬ ಎಂದು ಕೂಡ ಕರೆಯುತ್ತಾರೆ. ಎಳ್ಳು, ಬೆಲ್ಲ ತಿಂದು ಒಳ್ಳೆಯ ಮಾತನಾಡು ಎಂಬ ನಂಬಿಕಯುಳ್ಳ ಈ ಹಬ್ಬದ ಸಾರ್ಥಕತೆಯನ್ನುಮಕ್ಕಳಿಗೆ ತಿಳಿಸುವ ಅವಶ್ಯಕತೆ ಇದೆ. ಸೂರ್ಯ ಮಕರ ರಾಶಿಗೆ ಪ್ರವೇಶ ಪಡೆಯುತ್ತಾನೆ. ಆತ ಜಗತ್ತಿನ ಶಕ್ತಿ. ಮಕ್ಕಳು ಕೂಡ ಅಂತಹ ಶಕ್ತಿ ಬೆಳೆಸಿಕೊಳ್ಳಲಿ ಎಂದರು. ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಾಪಕರು ಹಾಗೂ ಪೋಷಕರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next