ಬೆಳಗಾವಿ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಬಾಲಕಾರ್ಮಿಕರ ರಕ್ಷಣೆಗೆ ಟಾಸ್‌ಪಾಸ್ಕ್ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲೆ ಕುರಿತು ಜಾಗೃತಿ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಸ್ಥಳೀಯ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಾ ಮಟ್ಟದಲ್ಲಿ ಕೂಡ ಕಾರ್ಮಿಕ ಭವನ, ಕಾರ್ಮಿಕ ಇಲಾಖೆ ಕಚೇರಿಗಳು ಇರಲೇಬೇಕು ಎಂದು ಸಚಿವ ಸಂತೋಷ್ ಲಾಡ್ ಸೂಚಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ ಪ್ರತಿಶತ 90 ರಷ್ಟು ಕೈಗಾರಿಕೆಗಳು ಮಚ್ಚೆ ಭಾಗದಲ್ಲಿ ಇರುವುದರಿಂದ ಎರಡು ಜಾಗೆಯಲ್ಲಿ ಇ.ಎಸ್.ಐ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಏಜೆನ್ಸಿಗಳು ಸರಿಯಾದ ಇ.ಎಸ್.ಐ-ಪಿ.ಎಫ್ ಪಾವತಿಸುತಿಲ್ಲ ಮತ್ತು ಪ್ರತಿ ನೌಕರ ತಿಂಗಳ ವೇತನದಲ್ಲಿ 1 ರಿಂದ 2 ಸಾವಿರ ಕಡಿತಗೊಳಿಸುತ್ತಿರುವ ಮಾಹಿತಿ ಲಭ್ಯವಿದೆ.
ಈ ಕುರಿತು ಈಗಾಗಲೇ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದು ವಿಷಯ ಚರ್ಚಿಸಿ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಹೊರಗುತ್ತಿಗೆ ಏಜೆನ್ಸಿಗಳು ಸರಿಯಾದ ಪ್ರತಿ ಮಾಸಿಕ ವೇತನ ನೀಡುತ್ತಿಲ್ಲ ಅಂತಹ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಸಂತೋಷ್ ಲಾಡ್ ಅವರು ಸೂಚನೆ ನೀಡಿದರು.
ಇದನ್ನೂ ಓದಿ: Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ