ಉಡುಪಿ: ಸಂತೋಷ್ ಪಾಟೀಲ್ ಅವರ ಮೃತ ದೇಹ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಲಾಡ್ಜ್ ನಲ್ಲಿ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದ್ದು, ಸಂತೋಷ್ ಪಾಟೀಲ್ ಅವರ ಸಹೋದರ ಗಿರೀಶ್ ಪಾಟೀಲ್ ಮತ್ತು ಸಂಭಂದಿಕರು ಮಂಗಳವಾರ ತಡರಾತ್ರಿ ಉಡುಪಿ ನಗರ ಠಾಣೆಗೆ ಆಗಮಿಸಲಿದ್ದಾರೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಶಾಂಭವಿ ಲಾಡ್ಜ್ ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಮತ್ತು ಮನೆಯವರ ಉಪಸ್ಥಿತಿಯಲ್ಲಿ ಪಂಚನಾಮೆ ಸೇರಿದಂತೆ ಹಲವು ಪ್ರಕ್ರಿಯೆಗಳು ಸುಮಾರು ಮೂರರಿಂದ ನಾಲ್ಕು ಗಂಟೆ ನಡೆಯಲಿದೆ
ಅದಾದ ನಂತರ ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8.46 ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗು ಉಡುಪಿ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಐಜಿಪಿ ಇದೊಂದು ಸೂಕ್ಷ್ಮ ಪ್ರಕರಣವಾಗಿದೆ. ಸಂತೋಷ್ ಪಾಟೀಲ್ ಅವರ ಮನೆಯವರು ಬಂದ ಬಳಿಕ ನುರಿತ ವಿಧಿ ವಿಜ್ಞಾನ ಪ್ರಯೋಗಾಲಯದ ಸಹಕಾರದೊಂದಿಗೆ ಮಹಜರು ಪ್ರಕ್ರಿಯೆ ನಡೆಸಲಾಗುವುದು ಎಂದರು.
ಇದನ್ನೂ ಓದಿ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು : ಕಟೀಲ್ ವಿಶ್ವಾಸ