Advertisement

ಸಂತೋಷ್ ಪಾಟೀಲ್‌ ಆತ್ಮಹತ್ಯೆ ಕೇಸ್: ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್

06:11 PM Jul 20, 2022 | Team Udayavani |

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.ಉಡುಪಿ ನಗರ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದು ಈಶ್ವರಪ್ಪ ಮೇಲಿನ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಹೇಳಲಾಗಿದೆ.

Advertisement

ಪ್ರಕರಣದಲ್ಲಿ ಖುಲಾಸೆಯಾಗುತ್ತಿದ್ದಂತೆ ಮಾಜಿ ಸಚಿವ ಈಶ್ವರಪ್ಪ ಅವರ ಶಿವಮೊಗ್ಗ ನಿವಾಸದಲ್ಲಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ನಾನು ಮುಕ್ತವಾಗಿ ಹೊರಗೆ ಬಂದಿದ್ದೇನೆ, ಆವತ್ತೇ ಹೇಳಿದ್ದೆ, ಆರೋಪದಿಂದ ಮುಕ್ತವಾಗಿ ಬರುತ್ತೇನೆ ಎಂದು. ಮನೆ ದೇವತೆ ಚೌಡೇಶ್ವರಿ ಆಶೀರ್ವಾದದಿಂದ , ಇಡೀ ದೇಶದ ಸಾಧು ಸಂತರ ಆಶೀರ್ವಾದ ನೀಡಿದ್ದರು. ನಮ್ಮ ಪಕ್ಷದ ನಾಯಕರು, ಕಾರ್ಯಕರತರು ಮುಜುಗರದಲ್ಲಿದ್ದರು, ಅವರೆಲ್ಲರೂ ಮುಜುಗರದಿಂದ ಹೊರ ಬಂದಿದ್ದಾರೆ ಎಂದರು.

ನನ್ನನ್ನು ಮತ್ತೆ ಸಚಿವನನ್ನಾಗಿ ಮಾಡುವುದು ಬಿಜೆಪಿಗೆ ಬಿಟ್ಟದ್ದು, ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು. ಈಗ ನಮ್ಮ ನಾಯಕರಾದ ಬಿ.ಎಸ್ . ಯಡಿಯೂರಪ್ಪ ಅವರು ಕರೆ ಮಾಡಿದ್ದರು. ಧೈರ್ಯವಾಗಿರಪ್ಪ, ಏನೂ ಆಗುವುದಿಲ್ಲಎಂದು ಹೇಳಿದರು, ಹಿಂದೆಯೂ ಹೇಳಿದ್ದರು ಎಂದರು.

ನಿರಾಧಾರವಾಗಿ ಆರೋಪ ಬಂದುದರಿಂದ ನನಗೆ ನೋವು ಇತ್ತು. ರಾಜಕಾರಣದಲ್ಲಿ ಆರೋಪಗಳು ಸಹಜ, ಆರೋಪದಿಂದ ಮುಕ್ತನಾದ ತೃಪ್ತಿ ಇದೆ ಎಂದರು.

Advertisement

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ “ತಾವು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಲು 40 ಪರ್ಸೆಂಟ್‌ ಲಂಚ ಕೇಳುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತಮ್ಮ ಸಾವಿಗೆ ಈಶ್ವರಪ್ಪ ಕಾರಣ ಎಂದು ವಾಟ್ಸ್‌ ಆ್ಯಪ್‌ ಮೆಸೇಜ್‌ ಮಾಡಿ ಏ.12 ರಂದು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಂತೋಷ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್‌ ಕೂಡ ದಾಖಲಾಗಿತ್ತು. ಬಳಿಕ ರಾಜಕೀಯ ಒತ್ತಡದ ಕಾರಣದಿಂದ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿಡಿದ್ದರು.

ಸಂತೋಷ್ ಪಾಟೀಲ್ ವೈಯಕ್ತಿಕ ಕಾರಣಗಳಿಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ನೆಲೆಗಟ್ಟಿನಲ್ಲಿ ತನಿಖೆ ಮುಂದುವರಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next