Advertisement
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷ ರಾಗಿ ಜೆ.ಪಿ.ನಡ್ಡಾ ಅವರು ಸೋಮವಾರ ಚುನಾಯಿತರಾದ ಹಿನ್ನೆಲೆ ಯಲ್ಲಿ ಹಲವು ಸಚಿವಾಕಾಂಕ್ಷಿಗಳು ದೆಹಲಿಗೆ ತೆರಳಿ ನೂತನ ರಾಷ್ಟ್ರೀಯ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಕೆಲವರು ಮಂಗಳವಾರ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಕೆಲಹೊತ್ತು ಚರ್ಚಿಸಿದರು ಎಂದು ಹೇಳಲಾಗಿದೆ.
Related Articles
Advertisement
ದೆಹಲಿಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ್, ಸಂಪುಟ ವಿಸ್ತರಣೆಯಾಗಬೇಕು. ಆದರೆ, ಪುನಾರಚನೆ ಬೇಡ ಎಂಬುದು ನನ್ನ ಅನಿಸಿಕೆ. ಆದರೆ, ಪಕ್ಷ ಕೈಗೊಳ್ಳುವ ತೀರ್ಮಾನ ಅಂತಿಮ. ಅನ್ಯ ಪಕ್ಷ ತೊರೆದು ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ ಸಚಿವ ಸ್ಥಾನ ಸಿಗಲಿದೆ. ಪರಾಭವಗೊಂಡವರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.
ಡಿಸಿಎಂ ಆಗಿ ಮುಂದುವರಿಯೋ ವಿಶ್ವಾಸ: ಹೈಕಮಾಂಡ್ ಮುಂದೆ ಯಾವ ನಿರ್ಧಾರ ಕೈಗೊಳ್ಳುವುದೋ ಗೊತ್ತಿಲ್ಲ. ಬಹಳಷ್ಟು ಮಂದಿಗೆ ಡಿಸಿಎಂ ಆಗಬೇಕು ಎಂಬ ಬಯಕೆ ಇದೆ. ಕೆಲವರು ಉಪಮುಖ್ಯಮಂತ್ರಿ ಹುದ್ದೆ ಕೈಬಿಡುವ ಬಗ್ಗೆ ಸಹಿ ಸಂಗ್ರಹ ಮಾಡಿದ್ದಾರೆ ಎನ್ನಲಾಗಿದೆ. ಕೆಲವರು ಸಹಿ ಸಂಗ್ರಹ ಮಾಡಿಲ್ಲ ಎಂದು ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯ ಹೇಳುವುದನ್ನು ನಾವು ಪ್ರಶ್ನಿಸಬಾರದು ಎಂದು ತಿಳಿಸಿದರು. ಸದ್ಯಕ್ಕೆ ಉಪಮುಖ್ಯಮಂತ್ರಿಯಾಗಿ ಮುಂದುವರಿಯುವ ವಿಶ್ವಾಸವಿದೆ.