Advertisement
ಖಜೂರಿಯಲ್ಲಿ ಸೋಮವಾರ ಜರಗಿದ ಜೆಡಿಎಸ್ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸೋಮಶೇಖರ್ ಜತೆ ಸ್ಯಾಂಟ್ರೋ ರವಿ ವರ್ಗಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಆ ವೀಡಿಯೋ ರೆಕಾರ್ಡ್ ನಾನು ಮಾಡಿಸಿದ್ದಲ್ಲ. ಇಂತಹ ವಿಷಯ ಇಟ್ಟುಕೊಂಡು ರಾಜಕೀಯ ಮಾಡುವ ಕರ್ಮ ನನಗಿಲ್ಲ. ದಲ್ಲಾಳಿಗಳೇ ಆಡಳಿತ ನಡೆಸುವ ಸ್ಥಿತಿಯನ್ನು ಬೊಮ್ಮಾಯಿ ಸೃಷ್ಟಿ ಮಾಡಿ ಕೊಂಡಿದ್ದಾರೆ ಎಂದರು.
ತಿಳಿಯುತ್ತಿಲ್ಲ.
– ಆರಗ ಜ್ಞಾನೇಂದ್ರ, ಗೃಹ ಸಚಿವ
Related Articles
ಮುಂದಿನ ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿಯಾಗಲಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Advertisement
ತಾಲೂಕಿನ ಖಜೂರಿ ಗ್ರಾಮದಲ್ಲಿ ಸೋಮವಾರ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆಯ ರೋಡ್ ಶೋ ಕಾರ್ಯಕ್ರಮದಲ್ಲಿ ಅನೇಕ ರೈತರು ಸಾಲ ಮನ್ನಾ ಬಗ್ಗೆ ಅಳಲು ತೋಡಿಕೊಂಡರು. ಅದಕ್ಕೆ ಸ್ಪಂದಿಸಿ ಮಾತನಾಡಿದ ಅವರು, ನಾನು ಅಧಿಕಾರದಲ್ಲಿದ್ದಾಗ ಮನ್ನಾ ಮಾಡಿದ ರೈತರ ಸಾಲವನ್ನು ಈ ಸರಕಾರ ಪೂರ್ಣವಾಗಿ ಜಾರಿಗೆ ತರದೆ ಸಾಕಷ್ಟು ಸಮಸ್ಯೆಯಾಗಿದೆ. ಸಾಲದ 95ರ ಫಾರಂ ತಿರಸ್ಕೃತವಾದರೆ ಸಂಬಂ ಧಿತ ಅ ಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಕ್ರಮ ಕೈಗೊಳ್ಳಬೇಕಿತ್ತು. ಅಧಿ ಕಾರದಲ್ಲಿ 500 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದೇನೆ. ಅದನ್ನು ರಾಜ್ಯ ಸರಕಾರ ಸಾಲ ಮನ್ನಾಕ್ಕೆ ಬಳಸದೆ ಬೇರೆ ಕಡೆ ವರ್ಗಾಯಿಸಿದೆ ಎಂದು ಆರೋಪಿಸಿದರು.
ಇನ್ನು ಮೂರು ತಿಂಗಳಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಸಾಲ ಮನ್ನಾ ಸಹಿತ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಪ್ರಧಾನಮಂತ್ರಿ ಬೆಳೆವಿಮೆ ಯೋಜನೆ ಮೋಸದ ಕಂಪೆನಿಯಾಗಿದೆ. ಸರಕಾರ ಅ ಧಿಕಾರಕ್ಕೆ ಬಂದರೆ ಮುಂದೆ ರೈತರಿಗೆ ಸರಕಾರದಿಂದಲೇ ಬೆಳೆ ವಿಮೆ ಜಾರಿಗೆ ತರುತ್ತೇನೆ ಎಂದು ಅವರು ಭರವಸೆ ನೀಡಿದರು.