Advertisement
ಪೊಲೀಸ್ ಬಿಗಿ ಭದ್ರತೆಯಲ್ಲಿ ಸೋಮವಾರ ಬೆಳಗ್ಗೆ ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದರು. ಈ ವೇಳೆ ಆರೋಪಿ ಪರ ವಕೀಲರು, ಹಲವು ಪ್ರಕರಣಗಳಲ್ಲಿ ಸಿಲುಕಿಸುವ ಪ್ರಯತ್ನ ನಡೆಯುತ್ತಿದ್ದು, ಜೀವ ಭಯವಿದೆ. ಅಲ್ಲದೆ ಆರೋಪಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅನುಮತಿ ನೀಡಿದರೆ ಜಾಮೀನಿಗೆ ಅರ್ಜಿ ಸಲ್ಲಿಸಲಾಗುವುದು ಎಂದರು.
Related Articles
Advertisement
ಸ್ಯಾಂಟ್ರೋಗೆ ಚೆಸ್ಟ್ ನಂಬರ್: ಕಳೆದ ಶನಿವಾರದಿಂದ ಮೈಸೂರು ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸ್ಯಾಂಟ್ರೋ ರವಿಗೆ 18894 ಚೆಸ್ಟ್ ನಂಬರ್ ನೀಡಲಾಗಿದೆ. ಇದರೊಂದಿಗೆ ಸಹಚರ ಸತೀಶ್‌ಗೆ 18895, ರಾಮ್‌ಜೀಗೆ 18896 ಸಂಖ್ಯೆಯನ್ನು ಜೈಲಾಧಿಕಾರಿಗಳು ನೀಡಿದ್ದಾರೆ.
ಪ್ರಕರಣ ಸಿಐಡಿಗೆ ವರ್ಗಾವಣೆ: ಆರೋಪಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ದೂರು ಹಾಗೂ ಆರೋ ಪ ಗಳ ಬಗ್ಗೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ವಹಿಸಲಾಗಿದೆ ಎಂದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿದರೆ ಅದರ ವಿರುದ್ಧ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಆರೋಪಿ ಪರ ವಕೀಲ ಹರೀಶ್ ಪ್ರಭು ತಿಳಿಸಿದ್ದಾರೆ.
ಮೈಸೂರು ಕಾರಾಗೃಹ ಜೈಲರ್ ವರ್ಗಾವಣೆ ಮೈಸೂರು: ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕ ಮಹೇಶ್‌ಕುಮಾರ್ ಎಸ್. ಜಿಗಣಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸ್ಯಾಂಟ್ರೋ ರವಿಯನ್ನು ಶನಿವಾರ ರಾತ್ರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಈ ವೇಳೆ ಅವರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ಈ ಮೊದಲು ಶಿವಮೊಗ್ಗದ ಕಾರಾಗೃಹದಲ್ಲಿ ಅಧೀಕ್ಷಕರಾಗಿದ್ದ ಮಹೇಶ್‌ಕುಮಾರ್ ಅವರನ್ನು ಬೆಂಗಳೂರಿನ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಮೈಸೂರಿನ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ಆದೇಶವನ್ನು ಸ್ಯಾಂಟ್ರೋ ರವಿ ತನ್ನ ಸ್ಟೇಟಸ್‌ನಲ್ಲಿ ಹಾಕಿಕೊಂಡು ಗೆಲುವಿನ ಚಿಹ್ನೆಗಳನ್ನು ಹಾಕಿದ್ದ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.