Advertisement
ಮತ್ತೊಂದೆಡೆ ರವಿಯನ್ನು ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳೆದೊಯ್ಯಲಾಗಿತ್ತು. ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿಗೆ ಬೆಳಗ್ಗೆ 11 ಗಂಟೆಗೆ ಪರಿಚಯಸ್ಥರ ಜತೆ ಆಗಮಿಸಿದ ರಶ್ಮಿಯನ್ನು ಡಿವೈಎಸ್ಪಿ ಅಂಜುಮಾಲಾ ನಾಯಕ್ ವಿಚಾರಣೆಗೆ ನಡೆಸಿದರು. ಅಪರಾಹ್ನ 12.30ರ ಸುಮಾರಿಗೆ ಶೇಷಾದ್ರಿಪುರಂನಲ್ಲಿರುವ ರವಿ ಜತೆ ವಾಸವಾಗಿದ್ದ ಫ್ಲ್ಯಾಟ್‌ನಲ್ಲಿ ಸ್ಥಳ ಮಹಜರು ಮಾಡಲಾಯಿತು. ಅನಂತರ ಗರ್ಭಪಾತ ಮಾಡಿಸಿದ ಆಸ್ಪತ್ರೆಗೆ ಕರೆದೊಯ್ದು ಮಾಹಿತಿ ಸಂಗ್ರಹಿಸಲಾಯಿತು. ಬಳಿಕ ಸಿಐಡಿ ಕಚೇರಿಯಲ್ಲಿ ಸಂಜೆ 6 ಗಂಟೆವರೆಗೂ ವಿಚಾರಣೆ ನಡೆಸಲಾಗಿದೆ.
Related Articles
ಸಿಐಡಿ ವಶದಲ್ಲಿರುವ ರವಿಗೆ ಶನಿವಾರ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಮಧುಮೇಹ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರವಿಗೆ ಆಗಾಗ್ಗೆ ವೈದ್ಯಕೀಯ ತಪಾಸಣೆ ಅಗತ್ಯವಿದೆ ಎಂದು ಸಿಐಡಿ ಪೊಲೀಸರು ಮಾಹಿತಿ ನೀಡಿದರು.
Advertisement