Advertisement

ಮಂಗಳೂರು: ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ

02:13 PM Jan 10, 2023 | Team Udayavani |

ಮಂಗಳೂರು: ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ತಮ್ಮ ನಿವಾಸದಲ್ಲಿ ಮಂಗಳವಾರ (ಜ.10) ನಿಧನ ಹೊಂದಿದರು.

Advertisement

ವಯೋಸಹಜ ಕಾರಣಗಳಿಂದ ನಿಧನ ಹೊಂದಿದ್ದಾರೆ.

ಗಡಿನಾಡು ಕಾಸರಗೋಡಿನಲ್ಲಿ ಜೂನ್ 30, 1936 ರಂದು ಹುಟ್ಟಿ ಬೆಳೆದ ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು. ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ.

ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ‌ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು.

ಅವರು‌ ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.

Advertisement

ಸಾರಾ ಅಬೂಬಕ್ಕರ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ   ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

 

 

 

Advertisement

Udayavani is now on Telegram. Click here to join our channel and stay updated with the latest news.

Next