Advertisement

ರಾಜ್ಯೋತ್ಸವ ಮೆರವಣಿಗೆ ಉದ್ಘಾಟನೆಗೆ ಸಾರಾ

11:12 AM Oct 29, 2017 | |

ಮಂಗಳೂರು, ಅ. 28: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ರಾಜ್ಯೋತ್ಸವದ ಪ್ರಯುಕ್ತ ನ. 1ರಂದು ಬೆಳಗ್ಗೆ 7.30ಕ್ಕೆ ನಗರದ ಬಲ್ಮಠ ರಸ್ತೆಯ ಅಂಬೇಡ್ಕರ್‌ ವೃತ್ತ, ಜ್ಯೋತಿ ಜಂಕ್ಷನ್‌ನಲ್ಲಿ ನಡೆಯುವ ಭುವನೇಶ್ವರಿಯ ಮೆರವಣಿಗೆಯನ್ನು ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕರ್‌ ಉದ್ಘಾಟಿಸಲಿದ್ದಾರೆ. ಶಾಂತಲಾ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೋಹನ್‌ ಕುಮಾರ್‌ ಅವರು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವರು.

Advertisement

ಅದೇ ದಿನ ಮಧ್ಯಾಹ್ನ 3.15ಕ್ಕೆ ಪುರಭವನದಲ್ಲಿ ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಡಾ| ಬಿ.ಎಂ. ಹೆಗ್ಡೆ
ಉದ್ಘಾಟಿಸಿ ರಾಜ್ಯೋತ್ಸವ ಸಂದೇಶ ನೀಡುವರು. ಇದೇ ಸಂದರ್ಭ ಹೊರನಾಡು ಸ್ಥಳೀಯ ಬಾಲಪ್ರತಿಭೆಗಳಿಗೆ ಸಾಧಕ ಪುರಸ್ಕೃತ ನೀಡಿ ಗೌರವಿಸಲಾಗುವುದು. ಕನ್ನಡ ಭುವನೇಶ್ವರಿಯ ಟ್ಯಾಬ್ಲೊ ಹಾಗೂ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳಲಿದ್ದು, ಜಿಲ್ಲೆಯ ಎಲ್ಲ ಕನ್ನಡ ಪರ ಸಂಘ – ಸಂಸ್ಥೆಗಳು, ಸಂಘಟನೆಗಳು ತಮ್ಮ ಸಂಸ್ಥೆಗಳ ನಾಮಾಂಕಿತ ಬ್ಯಾನರ್‌ಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ. 

ನಾಡು-ನುಡಿಯನ್ನು, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವೇಷಧಾರಿ ತಂಡಗಳು, ದಫ್‌, ತಾಲೀಮು, ಕೋಲಾಟ, ಗೊಂಬೆ ಕುಣಿತ, ಜನಪದ ಕುಣಿತ, ಹುಲಿ ವೇಷ ಇತ್ಯಾದಿ ಜಿಲ್ಲೆಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ತಂಡಗಳು ಈ ಸಂಭ್ರಮಾಚರಣೆಯ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next