Advertisement

ಹುಬ್ಬಳ್ಳಿ ಹೋಟೆಲ್ ನಲ್ಲಿ ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ!

01:55 PM Jul 05, 2022 | Team Udayavani |

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Advertisement

ಇಲ್ಲಿನ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ:ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ

ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಮಾತನಾಡಿಸಿದವರಂತೆ ಮಾಡಿ ಏಕಾಏಕಿ ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ದೊರೆತಿದ್ದು, ಅವರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಘಟನಾ ಸ್ಥಳಕ್ಕೆ ಡಿಸಿಪಿ ಸಾಹಿಲ ಬಾಗ್ಲಾ, ಗೋಪಾಲ ಬ್ಯಾಕೋಡ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next