ಭಾಲ್ಕಿ: ಬಸವಾದಿ ಶರಣರ ಚಿಂತನೆಗಳು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಬದುಕು ಸುಂದರವಾಗಲು ಸಾಧ್ಯ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ 281ನೆಯ ಮಾಸಿಕ ಶರಣ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾಜಿಕ, ಅಸಮಾನತೆ, ಶೋಷಣೆ, ಧಾರ್ಮಿಕ ಮೌಡ್ಯತೆ ವಿರುದ್ಧ ಶರಣರು ಕ್ರಾಂತಿ ಮಾಡಿದರು. ಸಮಾಜದಲ್ಲಿ ಕಾಯಕ, ದಾಸೋಹ, ನಂಬಿಕೆ, ಸಮಾನತೆ ಸಹೋದರತ್ವ ಸಾರಿದ ಶರಣರ ಚಿಂತನೆಗಳು ಎಲ್ಲ ಕಾಲಕ್ಕೂ ಶ್ರೇಷ್ಠವಾಗಿವೆ. ಪ್ರತಿಯೊಬ್ಬರು ಶರಣರು ತೋರಿದ ದಾರಿಯಲ್ಲಿ ನಡೆದು ನೆಮ್ಮದಿಯ ಬದುಕು ತಮ್ಮದಾಗಿಸಿಕೊಳ್ಳಬೇಕು ಎಂದರು.
ನೇತೃತ್ವ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿದರು. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಶಾಂತವೀರ ಕೇಸ್ಕರ್ ಅಧ್ಯಕ್ಷತೆ ವಹಿಸಿದ್ದರು.
ಸನ್ಮಾನ: ಇದೇ ವೇಳೆ ಡಾ| ಎಸ್. ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಚಂದ್ರಕಾಂತ ಬಿರಾದಾರ್, ರಾಜ್ಯಮಟ್ಟದ ಉತ್ತಮ ಉಪನ್ಯಾಸಕಿ ಪ್ರಶಸ್ತಿ ಪುರಸ್ಕೃತ ಮಲ್ಲಮ್ಮ ಆರ್ ಪಾಟೀಲ್, ನಿವೃತ್ತ ಉಪನ್ಯಾಸಕರಾದ ಚಂದ್ರಶೇಖರ ಬಿರಾದಾರ್, ನಿವೃತ್ತ ಪ್ರಾಚಾರ್ಯ ಡಾ| ಸೋಮಶೇಖರ ಮೈನಾಳೆ, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಲ್.ಡಿ.ಶಪುವುದ್ದಿನ್, ನಿವೃತ್ತ ಶಿಕ್ಷಕ ಶಿವಕುಮಾರ ಘಂಟೆ ಅವರನ್ನು ಶ್ರೀಮಠದ ಪರವಾಗಿ ಸನ್ಮಾನಿಸಲಾಯಿತು.