Advertisement

Sarapady: ಮರಳುಗಾರಿಕೆ ಸ್ಥಳಕ್ಕೆ ಗಣಿ ಅಧಿಕಾರಿಗಳ ದಾಳಿ

12:54 AM Mar 04, 2024 | Team Udayavani |

ಬಂಟ್ವಾಳ: ಸರಪಾಡಿ ಗ್ರಾಮದ ಪೆರ್ಲ ಪಾದಿಲದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮರಳು ಹಾಗೂ ಅದಕ್ಕೆ ಬಳಸಲಾದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಇಲಾಖೆಯ ಉಪನಿರ್ದೇಶಕ ಗಿರೀಶ್‌ ಮೋಹನ್‌ ಎಸ್‌.ಎನ್‌. ಅವರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದ್ದು, ಈ ವೇಳೆ ಕಾರ್ಮಿಕರು ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಲಾದ ದೋಣಿ, ಮೋಟಾರು, ಗ್ಯಾಸ್‌ ಸಿಲಿಂಡರ್‌, ಬುಟ್ಟಿ, ಹಾರೆ ಹಾಗೂ 25 ಎಂಟಿ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣವನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next