Advertisement

ಶರತ್‌ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ವಶಕ್ಕೆ

12:06 PM Jul 15, 2017 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಹಾಗೂ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿರುವ ಆರೆಸ್ಸೆಸ್‌ ಕಾರ್ಯಕರ್ತ ಶರತ್‌ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Advertisement

ಉನ್ನತ ಪೊಲೀಸ್‌ ಮೂಲಗಳ ಪ್ರಕಾರ, ಶರತ್‌ ಹತ್ಯೆ ಪ್ರಕರಣದ ತನಿಖೆ ಚುರುಕು ಗೊಂಡಿದೆ. ಕೇರಳದಿಂದ ಬಂದು ಶರತ್‌ ಅವ ರನ್ನು ಕೊಲೆ ಮಾಡಿ ಹೋಗಿದ್ದಾರೆ ಎಂಬ ಆರೋಪ ಗಳು ಕೇಳಿ ಬರುತ್ತಿವೆಯಾದರೂ ಪ್ರಸ್ತುತ ಪೊಲೀಸ್‌ ವಶದಲ್ಲಿರುವ ಈ ಇಬ್ಬರೂ ದ.ಕ. ಜಿಲ್ಲೆಯವರೇ ಎನ್ನಲಾಗಿದೆ. ಈ ಇಬ್ಬರು ಆರೋಪಿಗಳು ಶರತ್‌ ಕೊಲೆ ಪ್ರಕರಣ ದಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಹೆಚ್ಚಿನ ತನಿಖೆ ಬಳಿಕವಷ್ಟೇ ಗೊತ್ತಾಗಲಿದೆ. ಒಟ್ಟಾರೆ ಇನ್ನು ಕೆಲವೇ ದಿನ ಗಳಲ್ಲಿ ಸಾಕಷ್ಟು ಚರ್ಚೆ ಹಾಗೂ ಗದ್ದಲಕ್ಕೆ ಎಡೆ ಮಾಡಿ ರುವ ಶರತ್‌ ಹತ್ಯೆ ಪ್ರಕರಣದ ಆರೋಪಿಗಳ ಬಂಧನವಾಗುವ ಸಾಧ್ಯತೆ ದಟ್ಟ ವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ಜು. 4ರಂದು ರಾತ್ರಿ ಶರತ್‌ ಮೇಲೆ ಮರ ಣಾಂತಿಕ ಹಲ್ಲೆ ನಡೆದಿದ್ದು, ಚಿಕಿತ್ಸೆ ಫಲಕಾರಿ ಯಾಗದೆ ಜು. 6/7ರಂದು ತಡ ರಾತ್ರಿ ಸಾವ ನ್ನಪ್ಪಿ ದ್ದರು. ಪ್ರಕರಣಕ್ಕೆ ಸಂಬಂಧಿಸಿ 5 ತನಿಖಾ ತಂಡ ಗಳನ್ನು ರಚಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿವೆ.
ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಈ ಕೊಲೆ ಪ್ರಕರಣವನ್ನು ಅತಿ ಶೀಘ್ರದಲ್ಲಿ ಭೇದಿಸುವಂತೆ ನಿರಂತರ ಒತ್ತಡ ತರುತ್ತಿವೆ. ಹಿಂದೂ ಸಂಘಟನೆಗಳು ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ಪ್ರತಿಭಟನೆ  ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. 

ನಿಷೇಧಾಜ್ಞೆ ಜತೆಗೆ ಜಿಲ್ಲೆಯಲ್ಲಿ ವ್ಯಾಪಕ ಪೊಲೀಸ್‌ ಬಂದೋಬಸ್ತು ನಿಯೋಜಿಸ ಲಾಗಿದೆ. ಪೊಲೀಸರಿಗೆ ಸವಾಲಾಗಿರುವ ಈ ಪ್ರಕರಣವನ್ನು ಭೇದಿಸುವ ನಿಟ್ಟಿನಲ್ಲಿ ರಾಜ್ಯದ ಪೊಲೀಸ್‌ ಮಹಾ ನಿರ್ದೇಶಕ ಆರ್‌.ಕೆ. ದತ್ತ ಸಹಿತ ಉನ್ನತ ಪೊಲೀಸ್‌ ಅಧಿಕಾರಿಗಳು ಮತ್ತು ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡಿದ ಹಿರಿಯ ಪೊಲೀಸ್‌ ಅಧಿಕಾರಿಗಳು ಜಿಲ್ಲೆಯಲ್ಲಿ ಮೊಕ್ಕಾಂ ಮಾಡಿ ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ವಶಕ್ಕೆ ಪಡೆದಿರುವ ಇಬ್ಬರ ವಿಚಾರಣೆ ಮುಂದುವರಿದಿದ್ದು, ಕೆಲವೇ ದಿನಗಳಲ್ಲಿ ಆರೋಪಿಗಳ ಬಂಧನ ಆಗಲಿದೆ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next