ಕಿರುತೆರೆಯಲ್ಲಿ ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಸರಿಗಮಪ ಇದೀಗ ಮತ್ತೆ ಬರುತ್ತಿದೆ. ಜೀ಼ ಕನ್ನಡ ವಾಹಿನಿಯಲ್ಲಿ ಈಗ ಹೊಸ ಆವೃತ್ತಿಯೊಂದಿಗೆ ‘ಸರಿಗಮಪ’ ಕನ್ನಡಿಗರ ಮುಂದೆ ಬರಲು ಸಜ್ಜಾಗಿದೆ.
ಈ ಬಾರಿ 6 ವರ್ಷದಿಂದ 60 ವರ್ಷದವರೆಗಿನ ಸ್ಪರ್ಧಿಗಳು ಭಾಗವಿಸಬಹುದಾಗಿದ್ದು ಸ್ಪರ್ಧೆಯು ಮತ್ತಷ್ಟು ರೋಚಕವಾಗುತ್ತಿದೆ. ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಜೊತೆ ರಾಜೇಶ್ ಕೃಷ್ಣನ್ ಮತ್ತೆ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರೂಪಕಿ ಅನುಶ್ರೀ ಈ ಸೀಸನ್ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಈ ಬಾರಿ ವೀಕ್ಷಕರು ಜೀ಼ಕನ್ನಡ ‘ಸರಿಗಮಪ’ ಇನ್ಸ್ಟಾಗ್ರಾಂನ ಅಧಿಕೃತ ಪೇಜ್ ನಲ್ಲಿ ಪೋಸ್ಟ್ ಮಾಡುವ ಆಡಿಷನ್ ವೀಡಿಯೋಗಳನ್ನು ಲೈಕ್ ಮಾಡುವ ಮೂಲಕ ತಮ್ಮ ನೆಚ್ಚಿನ ಸ್ಪರ್ಧಿಗಳನ್ನು ಆಯ್ಕೆಮಾಡಿದ್ದಾರೆ. ಅತೀ ಹೆಚ್ಚು ಲೈಕ್ ಗಳಿಸಿರುವ ಸ್ಪರ್ಧಿಗಳು ಮೆಗಾ ಆಡಿಷನ್ ಗೆ ಬಡ್ತಿ ಪಡೆದಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಹಲವಾರು ಹಿಟ್ ಗಾಯಕರನ್ನು ನೀಡಿರುವ ಈ ‘ಸರಿಗಮಪ’ ಶೋ ಡಿಸೆಂಬರ್ 14 ರಿಂದ 7:30ಕ್ಕೆ ಪ್ರಸಾರವಾಗಲಿದೆ.