Advertisement

ರಿಷಿ ನಟನೆಯ “ಸಾರ್ವಜನಿಕರಿಗೆ ಸುವರ್ಣಾವಕಾಶ” ಟ್ರೇಲರ್ ಯೂಟ್ಯೂಬ್ ನಲ್ಲಿ ಭರ್ಜರಿ ಸದ್ದು

10:06 AM Dec 07, 2019 | Team Udayavani |

ಬೆಂಗಳೂರು: ಆಪರೇಶನ್ ಅಲಮೇಲಮ್ಮ ಖ್ಯಾತಿಯ ರಿಷಿ ನಾಯಕ ನಟನಾಗಿ ಅಭಿನಯಿಸಿರುವ “ಸಾರ್ವಜನಿಕರಿಗೆ ಸುವರ್ಣಾವಕಾಶ” ಸಿನಿಮಾದ ಟ್ರೇಲರ್ ಬಿಡುಗಡೆಗೊಂಡ ಎರಡು ದಿನಗದಲ್ಲಿಯೇ ಯೂಟ್ಯೂಬ್ ನಲ್ಲಿ ಭರ್ಜರಿ ಸದ್ದು ಮಾಡತೊಡಗಿದೆ.

Advertisement

ಅನೂಪ್ ರಾಮಸ್ವಾಮಿ ನಿರ್ದೇಶನದ ಸಾರ್ವಜನಿಕರಿಗೆ ಸುವರ್ಣಾವಕಾಶ ಸಿನಿಮಾದ ಟ್ರೇಲರ್ ಅನ್ನು ಈಗಾಗಲೇ ಸುಮಾರು ಮೂರು ಲಕ್ಷ ಮಂದಿ ವೀಕ್ಷಿಸಿದ್ದಾರೆ. ಬಿಡುಗಡೆ ಸಿದ್ಧತೆಯಲ್ಲಿರುವ ಸಿನಿಮಾದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡನ್ನು ಹಾಡಿದ್ದಾರೆ. ಈಗಾಗಲೇ ಪುನೀತ್ ಹಾಡು ವೈರಲ್ ಆಗಿದೆ.

ಕನ್ನಡ ಚಿತ್ರರಂಗದ ಪಾಲಿಗೆ ಹೊಸ ಅಲೆಯ ಸಿನಿಮಾಗಳ ಜಮಾನ. ಹೊಸಬರ ತಂಡಗಳು ಹೊಸತನ ಕಥೆಗಳೊಂದಿಗೆ ಬರುತ್ತಿರುವುದರಿಂದ ಇಂತಹ ಸಿನಿಮಾಗಳತ್ತ ಪ್ರೇಕ್ಷಕರೂ ಕೂಡಾ ಚಿತ್ತ ಹರಿಸುತ್ತಿದ್ದಾರೆ. ಈ ನಂಬಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವಂತಿರೋ ಚಿತ್ರ ಸಾರ್ವಜನಿಕರಿಗೆ ಸುವರ್ಣಾವಕಾಶ.

ಪ್ರೀತಿ, ಪ್ರೇಮ, ನಿಗೂಢ ಕಥಾ ಹಂದರವನ್ನು ಹೊಂದಿದೆ. ಈ ಚಿತ್ರವನ್ನು ದೇವರಾಜ್, ಪ್ರಶಾಂತ್ ರೆಡ್ಡಿ, ಜನಾರ್ದನ್ ಚಿಕ್ಕಣ್ಣ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಹಾಡು, ಟ್ರೇಲರ್ ಗೆ ಎಲ್ಲರೂ ಆಕರ್ಷಿತರಾಗಿದ್ದಾರೆ. ಸಾರ್ವಜನಿಕರಿಗೆ ಸುವರ್ಣಾವಕಾಶ ಚಿತ್ರದಲ್ಲಿ ರಿಷಿ,ಧನ್ಯಾ ಬಾಲಕೃಷ್ಣಾ, ದತ್ತಣ್ಣ, ರಂಗಾಯಣ ರಘು, ಮಿತ್ರ ಸೇರಿದಂತೆ ಹಲವರು ಮುಖ್ಯಭೂಮಿಕೆಯಲ್ಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next