Advertisement

ಶಶಿಕಲಾ ಅಸ್ವಸ್ಥ: ಆಸ್ಪತ್ರೆಗೆ ದಾಖಲು

12:09 PM Aug 31, 2018 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರಕಾರಾಗೃಹದಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಜೈಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಶಶಿಕಲಾ ಅವರು ರಕ್ತದೊತ್ತಡ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಗುರುವಾರ ಬೆಳಗ್ಗೆ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಜೈಲು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಶಶಿಕಲಾ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆರು ತಿಂಗಳ ಹಿಂದೆ ಕೂಡ ಶಶಿಕಲಾ ರಕ್ತದೊತ್ತಡ ಹಾಗೂ ಸಕ್ಕರೆ ಖಾಯಿಲೆಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಚಿಕಿತ್ಸೆ ಪಡೆದು ಶಶಿಕಲಾ ಗುಣಮುಖರಾಗಿದ್ದರು. ಈ ಮಧ್ಯೆ ಇವರ ಪತಿ ನಟರಾಜನ್‌ ಇತ್ತೀಚೆಗಷ್ಟೇ ನಿಧನರಾಗಿದ್ದರು. ಇದರಿಂದ ಮಾನಸಿಕವಾಗಿ ಕುಗ್ಗಿದ್ದರು. ಇದೀಗ ಪುನಃ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next