ಬೆಂಗಳೂರು : 2021-22ರ ಬಜೆಟ್ ಗೆ ಸಂಬಂಧಿಸಿದಂತೆ ಹೊಸ ಯೋಜನೆಗಳ ಕುರಿತು ಸಮಗ್ರ ರೂಪುರೇಷೆ ಸಿದ್ದಪಡಿಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಈವರೆಗೂ ಸಾಧಿಸಿರುವ ಪ್ರಗತಿ ಪರಿಶೀಲಿಸಿ, ಉಳಿದಂತಹ ಅನುದಾನವನ್ನು ಮುಂದಿನ ಫೆಬ್ರವರಿಯೊಳಗೆ ಸಮರ್ಪಕ ಕಾರ್ಯಕ್ರಮಗಳ ಮೂಲಕ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಪೆದ್ದಪ್ಪಯ್ಯ, ICPS ನಿರ್ದೇಶಕರಾದ ಪಲ್ಲವಿ ಆಕುರಾತಿ, ಹಿರಿಯ ನಾಗರಿಕರ ಸಬಲೀಕರಣ ಮತ್ತು ವಿಕಲಚೇತನ ಇಲಾಖೆಯ ನಿರ್ದೇಶಕರಾದ ಮುನಿರಾಜು, ಆಪ್ತ ಕಾರ್ಯದರ್ಶಿಗಳಾದ ಮಹೇಶ್ ಕರ್ಜಗಿ, ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ ಅವರ ಅತಿರೇಕದ ವರ್ತನೆಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ:ಕ್ಯಾ.ಗಣೇಶ್ ಕಾರ್ಣಿಕ್