Advertisement

ಅಣ್ಣಾಮಲೈ , ಗೋಪಿನಾಥನ್‌ ಈಗ ಸೆಂಥಿಲ್. ಏನಿದು ರಾಜೀನಾಮೆ ಪರ್ವ ರಹಸ್ಯ

10:58 AM Sep 07, 2019 | keerthan |

ಕಳೆದೆರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಸಸಿಕಾಂತ ಸೆಂಥಿಲ್‌ ಅವರು ಜಿಲ್ಲೆಯಲ್ಲಿ ಹಲವು ಜನಪರ ಕೆಲಸಗಳಿಂದ ಜನಪ್ರಿಯರಾಗಿದ್ದರು.

Advertisement

ಪ್ರಜಾಪ್ರಭುತ್ವ ವ್ಯವಸ್ಥೆಯ ಗೋಡೆಗಳು ಕುಸಿಯುತ್ತಿವೆ. ಮುಂದಿನ ದಿನಗಳಲ್ಲಿ ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ. ಸಿದ್ದಾಂತಕ್ಕೆ ವಿರುದ್ದವಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸೆಂಥಿಲ್‌ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು ಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಸಮಯದಲ್ಲಿ ಸಾರ್ವಜನಿಕ ಸೇವೆಯಲ್ಲಿರುವುದರಿಂದ ತನ್ನ ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ದಿಯು ದಾಮನ್‌ ನ ಐಎಎಫ್ ಅಧಿಕಾರಿ ಕಣ್ಣನ್‌ ಗೋಪಿನಾಥನ್‌ ಆಗಸ್ಟ್ ನಲ್ಲಿ ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆಯನ್ನು ಇನ್ನುಕೂಡಾ ಸ್ವೀಕರಿಸಲಾಗಿಲ್ಲ. ‌

ಖಡಕ್‌ ಐಪಿಎಸ್‌ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಕಳೆದ ಮೇ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ರಾಜೀನಾಮೆ ನೀಡಿದ್ದರು.  ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದರು.

2009ರ ಕರ್ನಾಟಕ ಕೆಡೆರ್‌ ನ ಐಎಎಸ್‌ ಅಧಿಕಾರಿಯಾಗಿದ್ದ ಸಸಿಕಾಂತ್‌ ಸೆಂಥಿಲ್‌, 2017ರ ಅಕ್ಟೋಬರ್‌ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

Advertisement

40 ವರ್ಷದ ಸಸಿಕಾಂತ್‌ ಸೆಂಥಿಲ್‌ ಮೂಲತಃ ತಮಿಳುನಾಡು ರಾಜ್ಯದವರು. ತಿರುಚನಾಪಲ್ಲಿಯ ಭಾರತೀದಾಸನ್‌ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್‌ ಮತ್ತು ಕಮ್ಯುನಿಕೇಶನ್‌ ವಿಷಯದಲ್ಲಿ ಇಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ.

2009ರಿಂದ 2012ರವರೆಗೆ  ಬಳ್ಳಾರಿಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿದ ಸಸಿಕಾಂತ್‌ ಸೆಂಥಿಲ್‌, ನಂತರ ಶಿವಮೊಗ್ಗ ಜಿಲ್ಲಾ ಪಂಚಾಯತ್‌ ಸಿಇಓ ಆಗಿ ಕೆಲಸ ಮಾಡಿದ್ದರು. ಚಿತ್ರದುರ್ಗ ಮತ್ತು ರಾಯಚೂರು ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದ ಸೆಂಥಿಲ್‌ 2016ರಲ್ಲಿ ಗಣಿ ಮತ್ತು ಭೂಗರ್ಭ ಇಲಾಖೆ ನಿರ್ದೇಶಕತರಾಗಿ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next