Advertisement
ರಾಜೀನಾಮೆ ಬಳಿಕ ಅವರು ಚೆನ್ನೈಗೆ ಹೋಗುತ್ತಾರೆ ಎನ್ನಲಾಗಿತ್ತು. ಆದರೆ ಅವರು ಶನಿವಾರ ಬೆಳಗ್ಗೆ ಮಂಗಳೂರಿನಲ್ಲಿದ್ದು, ಬಳಿಕ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ಅವರು ಜಿಲ್ಲೆಯಲ್ಲೇ ಉಳಿದುಕೊಂಡಿದ್ದು, ಎಲ್ಲಿದ್ದಾರೆ, ಎಲ್ಲಿಗೆ ತೆರಳಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ ಮಂಗಳೂರಿನಲ್ಲಿದ್ದ ಸೆಂಥಿಲ್ ಅವರು ಕೆಲವು ಮಾಧ್ಯಮಗಳ ಸಂಪರ್ಕಕ್ಕೆ ಸಿಕ್ಕಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದವರ ಜತೆ ಚಹಾಕೂಟ ನಡೆಸಿ ಔಪಚಾರಿಕವಾಗಿ ಮಾತನಾಡುವ ಇಚ್ಛೆಯನ್ನೂ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದೇ ಸಂದರ್ಭ ವಿವಿಧ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ ಎನ್ನಲಾಗಿದೆ. ಆ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಶನಿವಾರ ಸೆಂಥಿಲ್ ಅವರ ಭೇಟಿ ಬಯಸಿ ಮಂಗಳೂರಿನ ಜಿಲ್ಲಾಧಿಕಾರಿಯ ನಿವಾಸಕ್ಕೆ ಹಲವರು ಆಗಮಿಸಿದ್ದರು, ಆದರೆ ಕಾವಲು ಪೊಲೀಸರು ಅವರಿಲ್ಲ ಎಂದು ಹೇಳಿ ವಾಪಸ್ ಕಳುಹಿಸಿದ್ದಾರೆ.