Advertisement
ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.
Related Articles
Advertisement
ಈ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಆನ್-ಲೈನ್, ಆಫ್-ಲೈನ್, ಹ್ಯಾಂಡ್ಸ್-ಆನ್ ಮತ್ತು ಟ್ಯುಟೋರಿಯಲ್ ಮಾದರಿಗಳಲ್ಲಿ ಪರಿಚಯಾತ್ಮಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜತೆಗೆ, ಎರಡೂ ಭಾಷೆಗಳಲ್ಲಿ ಅಗತ್ಯ ಪಠ್ಯಗಳ ವೆಬ್-ಲಿಂಕ್ ಒದಗಿಸಲಾಗುವುದು. ಈ ಸಂಬಂಧದ ತರಗತಿಗಳು ಏಪ್ರಿಲ್ 22ರಿಂದ ಆರಂಭವಾಗಲಿವೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ:ಆಪರೇಷನ್ ಗಂಗಾ : ಭಾರತೀಯರನ್ನು ಹೊತ್ತ 6 ನೇ ವಿಮಾನ ದೆಹಲಿಯತ್ತ
ಈ ತರಬೇತಿಯಲ್ಲಿ ಉಪಗ್ರಹ ಪೇಲೋಡ್ ತಿಳಿವಳಿಕೆ, ನ್ಯಾನೋ ಉಪಗ್ರಹಗಳ ಪರಿಚಯ, ಬೆಂಗಳೂರಿನಲ್ಲಿರುವ ವೈಜ್ಞಾನಿಕ ಸಂಸ್ಥೆಗಳಿಗೆ ಭೇಟಿ, ಉಡಾವಣೆ ಸಮಯದಲ್ಲಿ ಶ್ರೀಹರಿಕೋಟಾಗೆ ಭೇಟಿ, ವಿಜ್ಞಾನಿಗಳೊಂದಿಗೆ ಸಂವಾದ, ಗ್ರೌಂಡ್ ಸ್ಟೇಷನ್ ನಲ್ಲಿ ತರಬೇತಿ, ಅಗತ್ಯ ಪುಸ್ತಕಗಳ ಪ್ರಕಟಣೆ ಮುಂತಾದ ಚಟುವಟಿಕೆಗಳು ಇರಲಿವೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.
ವಿಜ್ಞಾನ ಪ್ರದರ್ಶನದ ಆಕರ್ಷಣೆ: ಮಲ್ಲೇಶ್ವರದ ಪಿಯು ಕಾಲೇಜು ಮೈದಾನದಲ್ಲಿ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಮಳಿಗೆಗಳಿಗೆ ಭೇಟಿ ನೀಡಿದ ಸಚಿವರು, ಸಂಸದರು ಮತ್ತು ವಿಜ್ಞಾನಿಗಳು, ಅಲ್ಲಿ ಪ್ರದರ್ಶನಕ್ಕಿಟ್ಟಿದ್ದ ವೈಜ್ಞಾನಿಕ ಸಾಧನಗಳು ಮತ್ತು ಉಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರದರ್ಶನಕ್ಕೆ ಸಾವಿರಾರು ವಿಜ್ಞಾನಾಸಕ್ತರು ಕೂಡ ಭೇಟಿ ನೀಡಿದ್ದು, ಗಮನಾರ್ಹವಾಗಿತ್ತು.
ಕಾರ್ಯಕ್ರಮದಲ್ಲಿ ಉಪಗ್ರಹಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಕೈಪಿಡಿಯನ್ನೂ ಬಿಡುಗಡೆ ಮಾಡಲಾಯಿತು. ಜೊತೆಗೆ, ಎರಡು ಸರಕಾರಿ ಶಾಲೆಗಳಿಗೆ ಸಾಂಕೇತಿಕವಾಗಿ ವಿಜ್ಞಾನದ ಪ್ರಯೋಗ ಕಿಟ್ ವಿತರಿಸಲಾಯಿತು. ಉಳಿದ ಶಾಲೆಗಳಿಗೆ ಬಿಇಒಗಳ ಮೂಲಕ ಈ ಕಿಟ್ ತಲುಪಿಸಲಾಗುವುದು ಎಂದು ಸಚಿವರು ತಿಳಿಸಿದರು.