ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ ಎ೦ದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಡಿಸೆ೦ಬರ್ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ, ಮೂವರು ಅಭ್ಯರ್ಥಿಗಳ ಹೆಸರನ್ನು ಕೆಪಿಸಿಸಿಗೆ ಶಿಪಾರಸ್ಸು ಮಾಡಲಾಗುವದು ಎಂದು ಹೇಳಿದರು.
ಇದನ್ನೂ ಓದಿ:ಭೈರಗೊಂಡ ಹತ್ಯಾ ಯತ್ನ ಪ್ರಕರಣ : ಪೊಲೀಸರಿಂದ ಮತ್ತಿಬ್ಬರ ಬಂಧನ
ಉಪಚುನಾವಣೆಗೆ ಸ್ಪರ್ಧಿಸುವ ವಿಚಾರ ಇಲ್ಲ. ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿಯೇ ಇನ್ನು ತುಂಬಾ ಕೆಲಸ ಮಾಡಬೇಕಾಗಿದೆ. ಆದರೆ ಉಪಚುನಾವಣೆಗೆ ನನ್ನ ಹೆಸರು ಕೇಳಿ ಬಂದಿದೆಯಷ್ಟೆ. ಯಾವುದೂ ಅಂತಿಮ ಅಲ್ಲ ಎಂದರು.
ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ಇಲ್ಲ ಎಂದು ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.