Advertisement

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

04:19 PM Mar 18, 2024 | Team Udayavani |

ಬೆಳಗಾವಿ: ರಾಜ್ಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳುವದಿಲ್ಲ. ಆದರೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಮ್ಮದೇ ತಂತ್ರಗಾರಿಕೆಯನ್ನು ಅನುಸರಿಸುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಹೇಳಿದರು.

ಬಿಜೆಪಿ ಯವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೊಂಡು ಚುನಾವಣೆ ಎದುರಿಸಿದರೆ ನಾವು ಸಂವಿಧಾನ ಉಳಿಸಿ ಕಾಂಗ್ರೆಸ್ ಗೆಲ್ಲಿಸಿ ಎಂಬ ಘೋಷಣೆಯೊಂದಿಗೆ ಮತ ಕೇಳುತ್ತೇವೆ.

ಶ್ರೀರಾಮ ಕೇವಲ ಬಿಜೆಪಿ ಗೆ ಸೀಮಿತವಾಗಿಲ್ಲ. ಎಲ್ಲ ಸಮುದಾಯದಲ್ಲೂ ಶ್ರೀರಾಮ ಇದ್ದಾನೆ ಎಂದು ಸತೀಶ ಜಾರಕಿಹೋಳಿ ಹೇಳಿಕೆ.

ಇದನ್ನೂ ಓದಿ: ರೈತರ ಸಂಕಷ್ಟಕ್ಕೆ ನೆರವಾಗದ ರಾಜಕೀಯ ಪಕ್ಷಗಳು ಮತ ಕೇಳಲು ಬಂದರೆ ಛೀಮಾರಿ ಹಾಕಿ: ಕುರುಬೂರು

Advertisement
Advertisement

Udayavani is now on Telegram. Click here to join our channel and stay updated with the latest news.

Next