ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಮಹತ್ವದ ಹೇಳಿಕೆಯೊಂದನ್ನು ನೀಡಿದದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ಕೆಪಿಸಿಸಿಯ ಈಗಿರುವ ಅಧ್ಯಕ್ಷರನ್ನೇ ಮುಂದುವರಿಸಬೇಕೇ ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು. ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ, ಒಬ್ಬೊಬ್ಬರು ಎರಡೆರಡು ಹುದ್ದೆಯಲ್ಲಿದ್ದರೆ ತಮ್ಮ ಜವಾಬ್ದಾರಿ ನಿರ್ವಹಿಸುವುದು ಕಷ್ಟವಾಗುತ್ತದೆ. ಹೀಗಾಗಿ ಬದಲಾವಣೆ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯ. ಆದರೆ ಅದು ನಮ್ಮ ಹಂತದಲ್ಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲಾಧ್ಯಕ್ಷರ ನೇಮಕ ಕುರಿತು ಪ್ರತಿಕ್ರಿಯಿಸಿಡಾ ಅವರು ಈ ಸಂಬಂಧ ಎಲ್ಲರೂ ಸೇರಿ ಚರ್ಚೆ ಮಾಡಿ ಒಬ್ಬರ ಹೆಸರು ಅಂತಿಮಮಾಡಿ ವರಿಷ್ಠರಿಗೆ ಕೊಟ್ಟಿದ್ದೇವೆ. ಪಕ್ಷದ ಕೆಲಸಕ್ಕೆ ಯಾರು ಹೆಚ್ಚು ಸಮಯ ಕೊಡುತ್ತಾರೋ ಅಂತಹ ವ್ಯಕ್ತಿಯ ಹೆಸರನ್ನು ಕೊಡಲಾಗಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಅಧ್ಯಕ್ಷರ ಬದಲಾವಣೆ ಮಾಡುತ್ತೇವೆ ಎಂದರು.
ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ ಮೃಣಾಲ್ ಹೆಸರು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿ ಈ ರೀತಿ ಯಾವುದೇ ಚರ್ಚೆ ಆಗಿಲ್ಲ. ಒಂದೇ ಹೆಸರು ಕೊಟ್ಟಿದ್ದೇವೆ. ಪಕ್ಷ ಸಂಘಟನೆಗೆ ಹೆಚ್ಚು ಸಮಯ ನೀಡಬೇಕು. ಅಧ್ಯಕ್ಷರಾದವರು ಕಾಂಗ್ರೆಸ್ ಕಚೇರಿಯಲ್ಲಿ ಹೆಚ್ಚು ಇರಬೇಕು. ಕಾರ್ಯಕರ್ತರ ಜೊತೆಗೆ ನಿರಂತರ ಸಂಪರ್ಕ ಹೊಂದಿರಬೇಕು. ಇದೇ ಮಾನದಂಡವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸಾಮಾನ್ಯ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಡಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ: Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ