Advertisement

ಕಾಂಗ್ರೆಸ್ ಎಲ್ಲಾ ಸಮುದಾಯಗಳನ್ನು ಒಳಗೊಂಡಿರುವ ಪಕ್ಷ : ಸತೀಶ್ ಜಾರಕಿಹೊಳಿ

04:01 PM Feb 12, 2021 | Team Udayavani |

ಬೆಳಗಾವಿ  :  ಕಾಂಗ್ರೆಸ್ ಪಕ್ಷ ಅಹಿಂದ ಪರವಾಗಿಯೇ ಇದೆ. ಮತ್ತೆ ಅಹಿಂದ ಹೋರಾಟ ಮಾಡುವ ಅಗತ್ಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

Advertisement

ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯಗಳನ್ನು ಒಳಗೊಂಡಿರುವ ಪಕ್ಷವಾಗಿದೆ. ಹೀಗಾಗಿ, ಅಹಿಂದ ಹೋರಾಟವನ್ನು ಮತ್ತೆ ಸಂಘಟಿಸುವ ಅವಶ್ಯಕತೆ ಇಲ್ಲ ಎಂದು  ಶುಕ್ರವಾರ(ಫೆ. 12)ದಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದ್ದಾರೆ.

ಓದಿ : ಜಿಲ್ಲಾಡಳಿತಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ|ಸಂಜೀವ ಕುಮಾರ ಸೂಚನೆ

ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದಲ್ಲಿ ರಾಜಕೀಯವೂ ನಡೆಯುತ್ತಿದೆ ಹಾಗೂ ಷಡ್ಯಂತ್ರವೂ ಇದೆ. ಅರ್ಹವಾಗಿ ಮೀಸಲಾತಿ ಸಿಗಬೇಕಾದ ಸಮುದಾಯಗಳಿಗೆ ತೊಂದರೆಯನ್ನು ನೀಡಲಾಗುತ್ತಿದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಮುಖ್ಯಮಂತ್ರಿಗಳು ಸಮಯ ಕೇಳಿದ್ದಾರೆ. ಅವರ ನಿರ್ಣಯಕ್ಕಾಗಿ ಕಾಯುತ್ತೇವೆ. ಮುಂದೇನು ಕಾರ್ಯನಡೆ ಏನು ಎಂಬುದನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದಿದ್ದಾರೆ.

Advertisement

ಇನ್ನು, ಘಟಪ್ರಭಾದಲ್ಲಿರುವ ನಾ.ಸು. ಹರ್ಡೀಕರ್ ಸೇವಾದಳ ಕೇಂದ್ರದಲ್ಲಿ ವಿವಿಧ ರೀತಿಯ ತರಬೇತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ಕೇಂದ್ರದ ಸಾಂಕೇತಿಕ ಉದ್ಘಾಟನೆಗೆ ರಾಷ್ಟ್ರೀಯ ನಾಯಕರನ್ನು ಕರೆಸಬೇಕೆಂಬ ಯೋಚನೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಸದ್ಯಕ್ಕೆ ಅಲ್ಲಿ ಯಥಾಪ್ರಕಾರವಾಗಿ ಕಾರ್ಯಕ್ರಮಗಳು ನಡೆದಿವೆ ಎಂದು ಅವರು ಹೇಳಿದರು.

ಓದಿ : ಶೀಘ್ರದಲ್ಲೆ ಹಳಿಗಿಳಿಯಲಿವೆ ಎಲ್ಲಾ ಪ್ಯಾಸೆಂಜರ್ ರೈಲುಗಳು : ರೈಲ್ವೇ ಸಚಿವಾಲಯ

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಜಾರಕಿಹೊಳಿ, “ಬೆಳಗಾವಿ ಲೋಕಸಭೆ ಉಪಚುನಾವಣೆಯ ಅಭ್ಯರ್ಥಿಯ ಆಯ್ಕೆಯ ಕುರಿತು ಈಗಾಗಲೇ ಸ್ಥಳೀಯ ಮಟ್ಟದ ನಾಯಕರು ಹಾಗೂ ರಾಜ್ಯಮಟ್ಟದ ನಾಯಕರೊಂದಿಗೆ ಸಭೆಗಳನ್ನು ನಡೆಸಿ ಚರ್ಚಿಸಿದ್ದೇವೆ. ಅಂತಿಮವಾಗಿ ಕೆಲವು ಹೆಸರುಗಳನ್ನು ಹೈಕಮಾಂಡ್ ಗೆ ಕಳುಹಿಸಲಾಗಿದೆ.  ಹೈಕಮಾಂಡ್ ಸೂಕ್ತ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ತಿಳಿಸಿದರು.

“ಸಿ.ಎಂ. ಇಬ್ರಾಹಿಂ ಹಾಗೂ ಪಕ್ಷದ ನಡುವೆ ಭಿನ್ನಮತ ಉಂಟಾಗಿರುವ  ವಿಚಾರಕ್ಕೆ ಸ್ಪಂದಿಸಿದ ಅವರು, ಪಕ್ಷದ ವರಿಷ್ಠರಾದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ ಅವರು ಚರ್ಚಿಸಿ ಬಗೆಹರಿಸಲಿದ್ದಾರೆ” ಎಂದು ಹೇಳಿದ್ದಾರೆ.

ಓದಿ : ಕಿಚ್ಚ ಸುದೀಪ್‌ ಅವರ 25 ವರ್ಷದ ಸಿನಿ ಪಯಣಕ್ಕೆ ಆತ್ಮೀಯ ಅಭಿನಂದನೆ | Udayavani

Advertisement

Udayavani is now on Telegram. Click here to join our channel and stay updated with the latest news.

Next