ಬೆಳಗಾವಿ: ಬೆಳಗಾವಿ ತಾಲೂಕಿನ ಸಾಂಬ್ರಾ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯ ಹಾಗೂ ಸತೀಶ ಜಾರಕಿಹೊಳಿ ಅವರ ಬೆಂಬಲಿಗ ಕೃಷ್ಣಾ ಅನಿಗೋಳಕರ ಜಿಪಂ ಸದಸ್ಯ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರವಿವಾರ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲವಾರು ಜನ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಸೇರ್ಪಡೆಯಾಗುವ ತೀರ್ಮಾನ ಕೈಗೊಂಡಿದ್ದೇವೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಆಶಿರ್ವಾದ ಇದೆ ಎಂದರು.
ಮುಂಬರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಹೇಳಿದರು.
ಇದನ್ನೂ ಓದಿ:ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಶಿವಸೇನಾ ಸೇರ್ಪಡೆ ಅಧಿಕೃತ !
ಸುರೇಶ್ ಅಂಗಡಿಯವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಉಪಚುನಾವಣೆ ದಿನಾಂಕ ನಿಗದಿಯಾಗದೇ ಇದ್ದರೂ ರಾಜಕೀಯ ಚಟುವಟಿಕೆಗಳು ಆರಂಭವಾಗಿದೆ.