Advertisement

Belagavi: ಹೊಸ ವಂಟಮುರಿ ಘಟನೆ: ಸಂತ್ರಸ್ತ ಮಹಿಳೆಗೆ ಎರಡು ಎಕರೆ ಜಮೀನು ಮಂಜೂರು

07:14 PM Dec 16, 2023 | Team Udayavani |

ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.

Advertisement

ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು‌ ಮಾಡಿ ಆದೇಶಿಸಲಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು.

ಈ ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

2.03 ಎಕರೆ ಜಮೀನು ಮಂಜೂರಾತಿ ಜತೆಗೆ ಸರಕಾರವು ಈಗಾಗಲೇ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೂಡ ಘೋಷಿಸಿದೆ ಎಂದು ಅವರು ತಿಳಿಸಿದ್ದಾರೆ.

Advertisement

ಇದನ್ನೂ ಓದಿ: Protest: ಮಹಿಳೆಯರ ರಕ್ಷಣೆಗೆ ಗ್ಯಾರಂಟಿ ಇಲ್ಲ; ಬಿಜೆಪಿ ಮಹಿಳಾ ಮೋರ್ಚಾ ಆರೋಪ

Advertisement

Udayavani is now on Telegram. Click here to join our channel and stay updated with the latest news.

Next