Advertisement
ನಗರದ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್ ಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಬಿಮ್ಸ್ ಗೆ ತೆರಳಿ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು. ಮುಖ್ಯಮಂತ್ರಿಗಳೇ ಎಲ್ಲವನ್ನು ಮಾಡಲು ಆಗುವುದಿಲ್ಲ. ಒಂದು ವೇಳೆ ಮುಖ್ಯಮಂತ್ರಿ ಗಳೇ ಮಾಡುವದಾದರೆ ಸಚಿವರಿದ್ದು ಏನು ಪ್ರಯೋಜನ ಎಂದರು.
Related Articles
Advertisement
ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರಕರಣದ ಕುರಿತು ಪ್ರಸ್ತಾಪಿಸಿ ತನಿಖಾ ತಂಡ ಹಾಗೂ ನ್ಯಾಯಾಲಯದಿಂದಲೇ ಸತ್ಯಾಸತ್ಯತೆ ಹೊರಬರಬೇಕು. ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರು ಈಗಾಗಲೇ ಸರ್ಕಾರಕ್ಕೆ ತಮ್ಮ ಅಭಿಪ್ರಾಯ ಮತ್ತು ಆಗ್ರಹವನ್ನು ತಿಳಿಸಿದ್ದಾರೆ ಎಂದು ಹೇಳಿದರು. ಅಂತಿಮ ವರದಿ ಬರಲಿ, ಸತ್ಯಾಸತ್ಯತೆ ತಿಳಿಯಲಿ ಅಲ್ಲಿಯವರೆಗೆ ಕ್ಲೀನ್ ಚಿಟ್ ಹಾಗೂ ಮುಂದಿನ ಹೋರಾಟದ ಬಗ್ಗೆಯಾಗಲಿ ಮಾತನಾಡಲು ಆಗುವುದಿಲ್ಲ ಎಂದರು.
ಪೂಜೆ ಹಾಗೂ ಹೋಮದಿಂದ ಕೋವಿಡ್ ಹೋಗುತ್ತದೆ ಎಂದರೆ ಮಾಡಲಿ, ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅದನ್ನು ವೈಜ್ಞಾನಿಕವಾಗಿ ಎಲ್ಲರ ಮುಂದೆ ಸಾಬೀತು ಮಾಡಬೇಕು. ಅದು ನಿಜವಾದರೆ ಕಾಂಗ್ರೆಸ್ ನಿಂದ ಅಂತವರಿಗೆ ಸನ್ಮಾನ ಮಾಡಲಾಗುವುದು ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ಗೆ ಟಾಂಗ್ ನೀಡಿದರು.
ಹೋಮ, ಹವನ ಮಾಡುವುದು ಬಿಜೆಪಿಯವರಿಗೆ ಹೊಸದೇನಲ್ಲ. ಹೋಮದಿಂದ ಕೋವಿಡ್ ಹೋಗುತ್ತದೆ ಎನ್ನುವುದಾದರೆ ವೈದ್ಯರು, ಆಸ್ಪತ್ರೆ ಏಕೆ ಬೇಕು ಎಂದು ಸತೀಶ ಪ್ರಶ್ನಿಸಿದರು.