Advertisement
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತಹ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ ಮಹಾಂತೇಶ ಕವಟಗಿಮಠ ಇಬ್ಬರಲ್ಲಿ ಒಬ್ಬರನ್ನು ಗೆಲ್ಲಿಸಬೇಕು. ಇಬ್ಬರನ್ನೂ ಗೆಲ್ಲಿಸುವ ಶಕ್ತಿ ಅವರಲ್ಲಿ ಇಲ್ಲ ಎಂದರು.
Related Articles
Advertisement
ಸಾಮಾನ್ಯವಾಗಿ ಗ್ರಾಮ ಪಂಚಾಯತಿ ಸದಸ್ಯರು ಶಾಸಕರ ಕಂಟ್ರೋಲ್ ದಲ್ಲಿ ಇರಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಬಿಜೆಪಿ ಶಾಸಕರಿರುವುದರಿಂದ ನಿಮ್ಮ ಅಭ್ಯರ್ಥಿಯೇ ಗೆಲುವು ಪಡೆಯಲಿದ್ದಾರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬೆಳಗಾವಿಯಲ್ಲಿ ಬಿಜೆಪಿ ಶಾಸಕರು ಹೆಚ್ಚಿಗೆ ಇದ್ದರೂ ಸಹ, ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಸದಸ್ಯರು ಹೆಚ್ಚಿದ್ದಾರೆ ಇದರಿಂದ ನಮಗೆ ಅನುಕೂಲ ಎಂದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರನ್ನು ಒಂದಲ್ಲಾ ಒಂದು ರೀತಿ ಸುಲಿಗೆ ಮಾಡುತ್ತಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ ಮಾಡಿ ಇಂಟರ್ನೆಟ್ ಬೆಲೆ ಜಾಸ್ತಿ ಮಾಡಿದೆ ಎಂದು ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಪಕ್ಷ ವಿವೇಕರಾವ್ ಪಾಟೀಲ ಬಿಟ್ಟು, ಚನ್ನರಾಜ್ ಹಟ್ಟಿಹೊಳಿ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಪಕ್ಷೇತರವಾಗಿ ಲಖನ್ ಸ್ಪರ್ಧೆ ಮಾಡಿಸಿದ್ದೇನೆ ಎಂಬ ರಮೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ವಿವೇಕರಾವ್ ಪಾಟೀಲ್ ಅವರ ಮೇಲೆ ಅಷ್ಟೊಂದು ಪ್ರೀತಿ ಇದ್ದಿದ್ದರೆ ಲಖನ್ ಜಾಗದಲ್ಲಿ ವಿವೇಕರಾವ್ ಪಾಟೀಲ ನಿಲ್ಲಿಸಬೇಕಿತ್ತು. ಯಾಕೆ ಹಾಗೇ ಮಾಡಲಿಲ್ಲ ಎಂದು ಪ್ರಶ್ನಿಸಿದರು.